ವಾಷಿಂಗ್ಟನ್: ‘ನಾನು ಮೀಸಲಾತಿ ವಿರೋಧಿ ಅಲ್ಲ. ಮೀಸಲಾತಿ ಮಿತಿ ಈಗ ಶೇ 50ರಷ್ಟಿದ್ದು, ಈ ಮಿತಿಯನ್ನು ಹೆಚ್ಚಿಸುವುದು ಕಾಂಗ್ರೆಸ್‌ನ ಉದ್ದೇಶ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಸ್ಪಷ್ಟೀಕರಣ ನೀಡಿದ್ದಾರೆ.
ಇಲ್ಲಿನ ನ್ಯಾಷನಲ್ ಪ್ರೆಸ್ ಕ್ಲಬ್‌ನಲ್ಲಿ ನಡೆದ ಸಂದರ್ಶನದಲ್ಲಿ ಅವರು ಈ ಮಾತು ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ‘ಮೀಸಲಾತಿ ಕುರಿತಂತೆ ನಾನು ನೀಡಿದ ಹೇಳಿಕೆಯನ್ನು ಕೆಲವರು ತಪ್ಪಾಗಿ ಅರ್ಥೈಸಿದ್ದಾರೆ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.