ಶುಕ್ರವಾರ, 22 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಲೆ ಪ್ರಕರಣ: ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಜಾಮೀನು ಅವಧಿ ವಿಸ್ತರಣೆ

Published 8 ಜೂನ್ 2023, 14:23 IST
Last Updated 8 ಜೂನ್ 2023, 14:23 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ಕೊಲೆ ಪ್ರಕರಣದಲ್ಲಿ ತಮಗೆ ನೀಡಿರುವ ಜಾಮೀನು ಅವಧಿಯನ್ನು ವಿಸ್ತರಿಸುವಂತೆ ಪಾಕಿಸ್ತಾನ ಮಾಜಿ ಪ್ರಧಾನಮಂತ್ರಿ ಇಮ್ರಾನ್‌ ಖಾನ್‌ ಮಾಡಿದ್ದ ಮನವಿಯನ್ನು ಇಸ್ಲಾಮಾಬಾದ್‌ ಹೈಕೋರ್ಟ್‌ ಪುರಸ್ಕರಿಸಿದೆ. ಜಾಮೀನು ಅವಧಿಯನ್ನು 14 ದಿನಗಳ ವರೆಗೆ ಮುಂದೂಡಿದೆ.

ಈ ಬಗ್ಗೆ ಇಮ್ರಾನ್‌ ಪರ ವಕೀಲ ಗೋಹರ್‌ ಖಾನ್‌ ಮಾಹಿತಿ ನೀಡಿದ್ದಾರೆ.

ಇಮ್ರಾನ್‌ ಸದ್ಯ ಭಯೋತ್ಪಾದನೆಗೆ ಬೆಂಬಲ, ಗಲಭೆಗೆ ಪ್ರಚೋದನೆ, ಭ್ರಷ್ಟಾಚಾರ ಸೇರಿದಂತೆ ಹಲವು ಆರೋಪ ಪ್ರಕರಣಗಳಲ್ಲಿ ಜಾಮೀನಿನ ಮೇಲೆ ಹೊರಗಿದ್ದಾರೆ.

ಭ್ರಷ್ಟಾಚಾರ ಪ್ರಕರಣವೊಂದರ ವಿಚಾರಣೆ ಸಲುವಾಗಿ ಲಾಹೋರ್‌ನಿಂದ ಇಸ್ಲಾಮಾಬಾದ್‌ಗೆ ಆಮಿಸಿದ್ದ ಖಾನ್‌ ಅವರನ್ನು ಮೇ 9ರಂದು ಹೈಕೋರ್ಟ್‌ ಆವರಣದಲ್ಲಿ ಬಂಧಿಸಲಾಗಿತ್ತು. ಇದನ್ನು ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆಗಳು ನಡೆದಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT