ವಿಶ್ವಸಂಸ್ಥೆ: ಭಾರತ ಮತ್ತು ಪಾಕಿಸ್ತಾನ ನಡುವಿನ ಪರಿಸ್ಥಿತಿಯ ಕುರಿತು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಇಂದು ಗೋಪ್ಯ ಸಭೆ ನಡೆಸಲಿದೆ. ತುರ್ತು ಸಮಾಲೋಚನೆಗೆ ಪಾಕಿಸ್ತಾನದ ಮನವಿ ಮೇರೆಗೆ ಭದ್ರತಾ ಮಂಡಳಿ ಈ ಕ್ರಮಕ್ಕೆ ಮುಂದಾಗಿದೆ.

ಪಾಕಿಸ್ತಾನವು ಪ್ರಸ್ತುತ 15 ರಾಷ್ಟ್ರಗಳ ಭದ್ರತಾ ಮಂಡಳಿಯ ಶಾಶ್ವತವಲ್ಲದ ಸದಸ್ಯ ದೇಶವಾಗಿದ್ದು, ಮೇ ತಿಂಗಳಲ್ಲಿ ಗ್ರೀಸ್ ಅಧ್ಯಕ್ಷತೆ ವಹಿಸಿದೆ.

ಚೀನಾ, ಫ್ರಾನ್ಸ್, ರಷ್ಯಾ, ಬ್ರಿಟನ್ ಮತ್ತು ಅಮೆರಿಕ ವಿಟೋ ಅಧಿಕಾರವಿರುವ ಭದ್ರತಾ ಮಂಡಳಿಯ ಶಾಶ್ವತ ಸದಸ್ಯ ರಾಷ್ಟ್ರಗಳಾದರೆ, ಅಲ್ಜೀರಿಯಾ, ಡೆನ್ಮಾರ್ಕ್, ಗ್ರೀಸ್, ಗಯಾನಾ, ಪಾಕಿಸ್ತಾನ, ಪನಾಮ, ದಕ್ಷಿಣ ಕೊರಿಯಾ, ಸಿಯೆರಾ ಲಿಯೋನ್, ಸ್ಲೊವೇನಿಯಾ ಮತ್ತು ಸೊಮಾಲಿಯಾ. ಶಾಶ್ವತ ಸದಸ್ಯರಲ್ಲದ ರಾಷ್ಟ್ರಗಳಾಗಿವೆ.

ಪಹಲ್ಗಾಮ್ ದಾಳಿ ಬಳಿಕ ಪರಮಾಣು ಸಾಮರ್ಥ್ಯ ಹೊಂದಿರುವ ಭಾರತ ಮತ್ತು ಪಾಕಿಸ್ತಾನದ ನಡುವೆ ಉಲ್ಬಣಗೊಂಡಿರುವ ಉದ್ವಿಗ್ನತೆ ಶಮನಕ್ಕೆ ಸಭೆ ನಡೆಸಲು ಮನವಿ ಬಂದರೆ ಆ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ವಿಶ್ವಸಂಸ್ಥೆಗೆ ಗ್ರೀಸ್ನ ಶಾಶ್ವತ ಪ್ರತಿನಿಧಿ ಮತ್ತು ಮೇ ತಿಂಗಳ ಭದ್ರತಾ ಮಂಡಳಿ ಅಧ್ಯಕ್ಷ ಎವಂಗಿಲೋಸ್ ಸೆಕೆರಿಸ್ ಹೇಳಿದ್ದರು.

ಭಾರತವು ಪಾಕಿಸ್ತಾನದ ಗಡಿಯಾಚೆಗಿನ ಭಯೋತ್ಪಾದನೆಯಿಂದ ಬಳಲಿದ್ದು, ಈ ಬಗ್ಗೆ ಕ್ರಮ ಜರುಗಿಸಬೇಕಲ್ಲವೇ? ಎಂಬ ಪ್ರಶ್ನೆಗೂ ಉತ್ತರಿಸಿದ್ದ ಅವರು, ಇದು ಈಗ ಪ್ರಸ್ತುತ ಪ್ರಶ್ನೆಯಾಗಿದೆ ಎಂದು ಹೇಳಿದ್ದರು.

ಪಹಲ್ಗಾಮ್ನಲ್ಲಿ ನಡೆದ ಘೋರ ಭಯೋತ್ಪಾದಕ ದಾಳಿಯನ್ನು ನಾವು ಬಲವಾಗಿ ಖಂಡಿಸುತ್ತೇವೆ ಎಂದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.