ನವದೆಹಲಿ: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು (ಸೋಮವಾರ) ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕರ ದಾಳಿಯನ್ನು ಬಲವಾಗಿ ಖಂಡಿಸಿದ್ದು, ದಾಳಿಕೋರರನ್ನು ಶಿಕ್ಷೆಗೆ ಗುರಿಪಡಿಸುವಂತೆ ಆಗ್ರಹಿಸಿದ್ದಾರೆ.

ಇದೇ ವೇಳೆ ಭಯೋತ್ಪಾದನೆ ವಿರುದ್ಧದ ಭಾರತದ ಹೋರಾಟಕ್ಕೆ ಪುಟಿನ್ ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ) ತಿಳಿಸಿದೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಮಾಹಿತಿ ನೀಡಿದ್ದಾರೆ.

ಭಾರತ ಹಾಗೂ ರಷ್ಯಾ ನಡುವಣ ದ್ವಿಪಕ್ಷೀಯ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಲು ತಮ್ಮ ಬದ್ಧತೆಯನ್ನು ಮೋದಿ ಹಾಗೂ ಪುಟಿನ್ ಪುನರುಚ್ಚರಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

'ವಿಕ್ಟರಿ ಡೇ' 80ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ರಷ್ಯಾದ ಅಧ್ಯಕ್ಷರಿಗೆ ಪ್ರಧಾನಿ ಮೋದಿ ಶುಭಾಶಯಗಳನ್ನು ತಿಳಿಸಿದ್ದಾರೆ.

ಉನ್ನತ ಮಟ್ಟದ ಸಭೆಯಲ್ಲಿ ಭಾಗಿಯಾಗಲಿರುವ ಪುಟಿನ್...

ಇದೇ ಸಂದರ್ಭದಲ್ಲಿ ವಾರ್ಷಿಕ ಉನ್ನತ ಮಟ್ಟದ ಸಭೆಯಲ್ಲಿ ಭಾಗವಹಿಸುವಂತೆ ರಷ್ಯಾದ ಅಧ್ಯಕ್ಷರಿಗೆ ಪ್ರಧಾನಿ ಮೋದಿ ಆಹ್ವಾನ ನೀಡಿದ್ದಾರೆ. ಮೋದಿ ಅವರ ಆಹ್ವಾನವನ್ನು ಪುಟಿನ್ ಸ್ವೀಕರಿಸಿದ್ದಾರೆ ಎಂದು ಕ್ರೆಮ್ಲಿನ್ ತಿಳಿಸಿದೆ.
.ಅಣ್ವಸ್ತ್ರದಿಂದ ತಿರುಗೇಟು ಕೊಡುತ್ತೇವೆ: ಭಾರತಕ್ಕೆ ಪಾಕಿಸ್ತಾನ ಬೆದರಿಕೆ.Pahalgam Attack | ಪ್ರಧಾನಿ ಮೋದಿ ಭೇಟಿಯಾದ ರಕ್ಷಣಾ ಕಾರ್ಯದರ್ಶಿ, ಚರ್ಚೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.