ನ್ಯೂಯಾರ್ಕ್/ವಾಷಿಂಗ್ಟನ್: ಭಾರತದ ಸರ್ವಪಕ್ಷ ಸಂಸದೀಯ ನಿಯೋಗದ ಭೇಟಿಯ ಸಂದರ್ಭದಲ್ಲಿ ಭಯೋತ್ಪಾದನೆ ವಿರುದ್ಧದ ಹೋರಾಟ ಮತ್ತು ದ್ವಿಪಕ್ಷೀಯ ಕಾರ್ಯತಂತ್ರದ ಪಾಲುದಾರಿಕೆಯಲ್ಲಿ ಅಮೆರಿಕ ತನ್ನ ದೃಢವಾದ ಬೆಂಬಲವನ್ನು ಪುನರುಚ್ಚರಿಸಿದೆ ಎಂದು ಅಲ್ಲಿನ ವಿದೇಶಾಂಗ ಇಲಾಖೆ ತಿಳಿಸಿದೆ.

ವಾಷಿಂಗ್ಟನ್ನಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ನೇತೃತ್ವದ ಸಂಸದರ ನಿಯೋಗವು ಅಮೆರಿಕ ವಿದೇಶಾಂಗ ಇಲಾಖೆಯ ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿತ್ತು.

ಪಾಕಿಸ್ತಾನದ ನಿಯೋಗವೂ ಅಮೆರಿಕದ ಅಧಿಕಾರಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿತು ಎಂದು ವಿದೇಶಾಂಗ ಇಲಾಖೆಯ ವಕ್ತಾರ ಟ್ಯಾಮಿ ಬ್ರೂಸ್ ತಿಳಿಸಿದ್ದಾರೆ.

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪಾಕಿಸ್ತಾನದಿಂದ ಭರವಸೆ ದೊರಕಿದೆಯೇ ಎಂದು ಕೇಳಿದಾಗ ಮಾತುಕತೆಗಳ ವಿವರಗಳ ಕುರಿತು ಇಲ್ಲಿ ಚರ್ಚಿಸಲು ಹೋಗುವುದಿಲ್ಲ ಎಂದು ಬ್ರೂಸ್ ಹೇಳಿದ್ದಾರೆ.

ಕಾಶ್ಮೀರದ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸಲು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದಾಗಿದ್ದಾರೆಯೇ ಎಂದು ಕೇಳಿದಾಗ, 'ಅಧ್ಯಕ್ಷರ ಮನಸ್ಸಿನಲ್ಲಿ ಏನಿದೆ ಅಥವಾ ಅವರ ಯೋಜನೆಗಳ ಕುರಿತು ನಾನು ಮಾತನಾಡಲು ಸಾಧ್ಯವಿಲ್ಲ. ಆದರೆ ಅಧ್ಯಕ್ಷರು ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರವು ರಾಷ್ಟ್ರಗಳ ನಡುವಿನ ಯುದ್ಧವನ್ನು ಕೊನೆಗೊಳಿಸಲು ನೆರವಾಗುತ್ತದೆ ಎಂಬ ನಂಬಿಕೆಯಿದೆ' ಎಂದು ಹೇಳಿದ್ದಾರೆ.

ಪಾಕಿಸ್ತಾನದ ಮೇಲೆ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯ ಬಳಿಕ ಭಯೋತ್ಪಾದನೆ ಕುರಿತು ಭಾರತದ ನಿಲುವು ಸ್ಪಷ್ಟಪಡಿಸಲು ಸರ್ವಪಕ್ಷ ನಿಯೋಗ ಅಮೆರಿಕಕ್ಕೆ ಭೇಟಿ ನೀಡಿತ್ತು. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದನೆ ದಾಳಿಗೆ ಪ್ರತೀಕಾರವಾಗಿ ಭಾರತ 'ಆಪರೇಷನ್ ಸಿಂಧೂರ' ಹೆಸರಿನಲ್ಲಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿತ್ತು.
.ದೇಶದ ಧ್ವನಿ ಎತ್ತಿದ್ದ ಸರ್ವಪಕ್ಷ ನಿಯೋಗಗಳ ಕುರಿತು ಪ್ರಧಾನಿ ಮೋದಿ ಹೆಮ್ಮೆ.ಅಮೆರಿಕ | ಲಾಸ್ ಏಂಜಲೀಸ್ನಲ್ಲಿ ತೀವ್ರಗೊಂಡ ಪ್ರತಿಭಟನೆ, ನಿಷೇಧಾಜ್ಞೆ ಜಾರಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.