ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪಾಕಿಸ್ತಾನ | ಪ್ರತಿಭಟನೆ ಪ್ರಕರಣ: ಇಮ್ರಾನ್‌ ಖಾನ್‌ ಖುಲಾಸೆ

Published 3 ಜುಲೈ 2024, 16:15 IST
Last Updated 3 ಜುಲೈ 2024, 16:15 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ಚುನಾವಣಾ ಆಯೋಗವು ಇಮ್ರಾನ್‌ ಅವರನ್ನು ಅನರ್ಹಗೊಳಿಸಿದ್ದರ ವಿರುದ್ಧ ಪ್ರತಿಭಟನೆ ನಡೆಸಿದ್ದ ಪ್ರಕರಣದಲ್ಲಿ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಮತ್ತು ಪಕ್ಷದ ಹಲವು ಹಿರಿಯ ನಾಯಕರನ್ನು ಇಲ್ಲಿನ ಕೋರ್ಟ್‌ ಬುಧವಾರ ಖುಲಾಸೆಗೊಳಿಸಿದೆ.

ಇಲ್ಲಿನ ಸೆಷನ್ಸ್‌ ನ್ಯಾಯಾಲಯವು ಶಾ ಮಹಮ್ಮದ್ ಖುರೇಷಿ, ಶೇಖ್‌ ರಶೀದ್‌, ಅಸಾದ್‌ ಕೈಸರ್‌, ಫೈಸಲ್‌ ಜಾವೇದ್‌, ಆಲಿ ನವಾಜ್‌ ಮತ್ತಿತರರನ್ನು ಆರೋಪಮುಕ್ತಗೊಳಿಸಿ ಆದೇಶಿಸಿದೆ.

ತೋಷಖಾನ ಭ್ರಷ್ಟಾಚಾರ ಪ್ರಕರಣದಲ್ಲಿ ಇಮ್ರಾನ್‌ ಖಾನ್‌ ಅವರನ್ನು ಅನರ್ಹಗೊಳಿಸಿದ್ದನ್ನು ವಿರೋಧಿಸಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ನಡೆಸಲಾಗಿತ್ತು. ಈ ಸಂಬಂಧ ಪ್ರಕರಣ ದಾಖಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT