ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಸರ್ಕಾರದ ವಿರುದ್ಧ 2022ರ ಮಾರ್ಚ್‌ನಲ್ಲಿ ನಡೆದ ಮೆರವಣಿಗೆಯಲ್ಲಿ ನಡೆದಿದ್ದ ವಿಧ್ವಂಸಕ ಘಟನೆಗಳಿಗೆ ಸಂಬಂಧಿಸಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಇಲ್ಲಿನ ನ್ಯಾಯಾಲಯವೊಂದು ಮಂಗಳವಾರ ಖುಲಾಸೆಗೊಳಿಸಿದೆ.

ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಶೈಯಿಷ್ಟಾ ಕುಂದಿ ಅವರು ಖಾನ್ ಅರ್ಜಿಯ ವಿಚಾರಣೆ ನಡೆಸಿ ಅವರನ್ನು ಖುಲಾಸೆಗೊಳಿಸಿದ್ದಾರೆ ಎಂದು ಜಿಯೊ ನ್ಯೂಸ್ ವರದಿ ಮಾಡಿದೆ.

ಖಾನ್ ಪರವಾಗಿ ನಯೀಮ್ ಪಂಜೋತಾ ವಾದ ಮಂಡಿಸಿದರು.

2022ರಲ್ಲಿ ತಮ್ಮ ಪದಚ್ಯುತಿ ನಂತರ ತಕ್ಷಣ ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿ ಇಮ್ರಾನ್ ಖಾನ್ ಮೆರವಣಿಗೆ ನಡೆಸಿದ್ದರು. ಈ ವೇಳೆ ಅವರ ಹತ್ಯೆ ಯತ್ನ ಸಹ ನಡೆದಿತ್ತು.

ಪಾಕಿಸ್ತಾನ್ ತೆಹ್ರೀಕ್ ಇ ಇನ್ಸಾಫ್ (ಪಿಟಿಐ) ಪಕ್ಷದ ಸಂಸ್ಥಾಪಕ ಇಮ್ರಾನ್ ಖಾನ್ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಸ್ತುತ ಜೈಲಿನಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.