ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ ಜಾಮೀನು ಧೃಡ

Published 2 ಮಾರ್ಚ್ 2024, 13:16 IST
Last Updated 2 ಮಾರ್ಚ್ 2024, 13:16 IST
ಅಕ್ಷರ ಗಾತ್ರ

ಲಾಹೋರ್‌: ಮೇ 9ರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ನಾಲ್ಕು ಪ್ರಕರಣಗಳಲ್ಲಿ ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ ಅವರಿಗೆ ಮಧ್ಯಂತರ ಜಾಮೀನು ನೀಡಿರುವುದನ್ನು ಪಾಕಿಸ್ತಾನದ ನ್ಯಾಯಾಲಯ ದೃಢಪಡಿಸಿದೆ ಎಂದು ಮಾಧ್ಯಮ ವರದಿಯೊಂದು ಶನಿವಾರ ತಿಳಿಸಿದೆ.

ಪಾಕಿಸ್ತಾನ್ ತೆಹ್ರೀಕ್ ಇ ಇನ್ಸಾಫ್‌ (ಪಿಟಿಐ) ಪಕ್ಷದ ಸಂಸ್ಥಾಪಕ ಇಮ್ರಾಮ್‌ ಖಾನ್‌ ಪ್ರಸ್ತುತ ಅನೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾವಲ್ಪಿಂಡಿಯ ಅಡಿಯಾಲಾ ಜೈಲಿನಲ್ಲಿದ್ದಾರೆ.

ಕಳೆದ ವರ್ಷ ನಡೆದ ಹಿಂಸಾಚಾರದಲ್ಲಿ ಪಿಟಿಐ ಕಾರ್ಯಕರ್ತರು ಪಾಕಿಸ್ತಾನದ ಸೇನಾ ನೆಲೆಗಳ ಮೇಲೆ ದಾಳಿ ನಡೆಸಿದ್ದರು.

ಶುಕ್ರವಾರ ನಡೆದ ಇಮ್ರಾನ್‌ ಖಾನ್ ಅವರ ಜಾಮೀನು ಅರ್ಜಿಗಳ ವಿಚಾರಣೆಯ ಸಮಯದಲ್ಲಿ, ಭಯೋತ್ಪಾದನಾ ವಿರೋಧಿ ನ್ಯಾಯಾಲಯದ (ಎಟಿಸಿ) ನ್ಯಾಯಾಧೀಶರಾದ ಅರ್ಶದ್ ಜಾವೇದ್‌ ಅವರು ನಾಲ್ಕು ಪ್ರಕರಣಗಳಿಗೆ ಸಂಬಂಧಿಸಿದಂತೆ ಇಮ್ರಾನ್ ಅವರ ಮಧ್ಯಂತರ ಜಾಮೀನನ್ನು ದೃಢಪಡಿಸಿದರು. ₹ 5 ಲಕ್ಷ ಮೊತ್ತದ ಭದ್ರತಾ ಬಾಂಡ್‌ ಒದಗಿಸುವಂತೆ ಆದೇಶಿಸಲಾಗಿದೆ ಎಂದು ದ ನ್ಯೂಸ್‌ ಇಂಟರ್‌ನ್ಯಾಷನಲ್‌ ಪತ್ರಿಕೆಯು ಶನಿವಾರ ವರದಿ ಮಾಡಿದೆ.

ಎಟಿಸಿಯ ಮತ್ತೊಬ್ಬ ನ್ಯಾಯಾಧೀಶರಾದ ನವೀದ್ ಇಕ್ಬಾಲ್‌ ಅವರು ಮೂರು ಪ್ರಕರಣಗಳಿಗೆ ಸಂಬಂಧಿಸಿದಂತೆ ಖಾನ್‌ ಅವರ ಮಧ್ಯಂತರ ಜಾಮೀನನ್ನು ಮಾರ್ಚ್‌ 7ರವರೆಗೆ ವಿಸ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT