ಇಸ್ಲಾಮಾಬಾದ್: ಎರಡನೇ ತೋಷಖಾನಾ ಪ್ರಕರಣದಲ್ಲಿ ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಅವರ ಪತ್ನಿ ಬುಶ್ರಾ ಬೀಬಿ ಅವರಿಗೆ ನೀಡಿರುವ ಮಧ್ಯಂತರ ಜಾಮೀನಿನ ಅವಧಿಯನ್ನು ಪಾಕಿಸ್ತಾನದ ನ್ಯಾಯಾಲಯವು ಜ.7ರವರೆಗೆ ವಿಸ್ತರಿಸಿ ಮಂಗಳವಾರ ಆದೇಶ ಹೊರಡಿಸಿದೆ.

ವಿವಿಧ ಪ್ರಕರಣಗಳಲ್ಲಿ ಆರೋಪಿಯಾಗಿರುವ ಇಮ್ರಾನ್ ಖಾನ್ ಹಲವು ತಿಂಗಳಿಂದ ಜೈಲಿನಲ್ಲಿದ್ದಾರೆ. ಇಸ್ಲಾಮಾಬಾದ್ ಹೈಕೋರ್ಟ್ ಜಾಮೀನು ನೀಡಿದ್ದರಿಂದ ಬುಶ್ರಾ, ಕಳೆದ ಅಕ್ಟೋಬರ್ನಲ್ಲಿ ಜೈಲಿನಿಂದ ಬಿಡುಗಡೆ ಆಗಿದ್ದಾರೆ.

ಇಸ್ಲಾಮಾಬಾದ್ ಮೂಲದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಮೊಹಮ್ಮದ್ ಅಫ್ಜಲ್ ಮುಜೊಕಾ ಈ ಪ್ರಕರಣಕ್ಕೆ ಸಂಬಂಧಿಸಿದ ಜಾಮೀನು ಅರ್ಜಿಗಳ ವಿಚಾರಣೆ ನಡೆಸಿದರು. ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಿಸಿ, ವಿಚಾರಣೆ ಮುಂದೂಡಿದರು.

ಇಮ್ರಾನ್ ಖಾನ್ ಅವರು ಪ್ರಧಾನಿಯಾಗಿದ್ದ ಅವಧಿಯಲ್ಲಿ ಅಮೂಲ್ಯವಾದ ಆಭರಣ ಸೆಟ್ಗಳನ್ನು ಸ್ವಾಧೀನಪಡಿಸಿಕೊಳ್ಳಲಿಕ್ಕಾಗಿ, ರಾಜ್ಯ ಉಡುಗೊರೆ ಭಂಡಾರ–ತೋಷಖಾನಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ದೋಷಾರೋಪಣೆ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.