ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆದಿಯಾಲಾ ಬದಲು ಅಟಕ್ ಜೈಲಿನಲ್ಲಿ ಇಮ್ರಾನ್

Published 6 ಆಗಸ್ಟ್ 2023, 14:43 IST
Last Updated 6 ಆಗಸ್ಟ್ 2023, 14:43 IST
ಅಕ್ಷರ ಗಾತ್ರ

ಇಸ್ಲಾಮಾಬಾದ್: ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರು ನ್ಯಾಯಾಲಯದ ಆದೇಶದ ಪ್ರಕಾರ ರಾವಲ್ಪಿಂಡಿಯ ಆದಿಯಾಲಾ ಜೈಲಿನಲ್ಲಿರಬೇಕಿತ್ತು. ಆದರೆ ಅಟಕ್ ನಗರದ ಜೈಲಿನಲ್ಲಿದ್ದಾರೆ ಎಂದು ‘ಡಾನ್‌’ ಪತ್ರಿಕೆ ವರದಿ ಮಾಡಿದೆ. 

ತೋಷಖಾನಾ ಭ್ರಷ್ಟಾಚಾರ ಪ್ರಕರಣದಲ್ಲಿ ಇಮ್ರಾನ್‌ ಖಾನ್‌ಗೆ (70) ನ್ಯಾಯಾಲಯ ಮೂರು ವರ್ಷ ಜೈಲು ಶಿಕ್ಷೆ ವಿಧಿಸುತ್ತಿದ್ದಂತೆ, ಲಾಹೋರ್‌ನ ಅವರ ನಿವಾಸದಲ್ಲಿ ಶನಿವಾರ ಬಂಧಿಸಲಾಗಿತ್ತು.

ಪಾಕಿಸ್ತಾನ್‌ ತೆಹ್ರೀಕ್‌ ಇ ಇನ್ಸಾಫ್ (ಪಿಟಿಐ) ಪಕ್ಷದ ಅಧ್ಯಕ್ಷರನ್ನು ಇಸ್ಲಾಮಾಬಾದ್‌ನ ಪೊಲೀಸ್ ಮುಖ್ಯಸ್ಥರು ಬಂಧಿಸಬೇಕು ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಹುಮಾಯೂನ್ ದಿಲಾವರ್ ಆದೇಶಿಸಿದ್ದರು. ಆದರೆ ಪಂಜಾಬ್ ಪೊಲೀಸರು ಇಮ್ರಾನ್‌ಖಾನ್‌ ಅವರನ್ನು ಬಂಧಿಸಿದ್ದಾರೆ.

ರಾವಲ್ಪಿಂಡಿಯ ಆದಿಯಾಲಾ ಜೈಲಿನಲ್ಲಿರಿಸಿ ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ತಿಳಿಸಿದ್ದರೂ, ಭಾರಿ ಬಿಗಿ ಭದ್ರತೆಯೊಂದಿಗೆ ಅಟಕ್‌ ಜೈಲಿನಲ್ಲಿರಿಸಲಾಗಿದೆ ಎಂದು ‘ಡಾನ್‌’ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT