ಇಸ್ಲಾಮಾಬಾದ್: 2023ರ ಮಾರ್ಚ್ 9ರಂದು ನಡೆದ ಪ್ರತಿಭಟನೆಯಲ್ಲಿ ಹಿಂಸಾಚಾರ ಹಾಗೂ ವಿಧ್ವಂಸಕ ಕೃತ್ಯಗಳನ್ನು ಎಸಗಿದ ಪ್ರಕರಣದಲ್ಲಿ ಪಾಕಿಸ್ತಾನ ತೆಹ್ರೀಕ್–ಎ–ಇನ್ಸಾಫ್ (ಪಿಟಿಐ) ಪಕ್ಷದ ನಾಯಕರು ಹಾಗೂ ಬೆಂಬಲಿಗರು ಸೇರಿ 47 ಮಂದಿಗೆ ಇಲ್ಲಿನ ಭಯೋತ್ಪಾದನಾ ನಿಗ್ರಹ ನ್ಯಾಯಾಲಯವು ತಲಾ 10 ವರ್ಷ ಜೈಲು ಹಾಗೂ 5 ಲಕ್ಷ ಪಾಕಿಸ್ತಾನ ರೂಪಾಯಿ ದಂಡ ವಿಧಿಸಿ ಶನಿವಾರ ತೀರ್ಪು ನೀಡಿದೆ.

ಪಕ್ಷದ ಮುಖ್ಯಸ್ಥ, ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಬಂಧನ ವಿರೋಧಿಸಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ದೇಶದಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ವೇಳೆ ಸಾರ್ವಜನಿಕ ಆಸ್ತಿಗಳನ್ನು ಧ್ವಂಸ ಮಾಡಲಾಗಿತ್ತು. ಬೆಂಕಿ ಹಚ್ಚುವುದು, ಮುತ್ತಿಗೆ ಹಾಕುವುದು ಹಾಗೂ ಪೊಲೀಸರ ಮೇಲೆ ದಾಳಿ ಮಾಡುವುದು ಸೇರಿದಂತೆ ಹಲವು ಕೃತ್ಯಗಳನ್ನು ಎಸಗಲಾಗಿತ್ತು.

ರಾವಲ್ಪಿಂಡಿ ನ್ಯಾಯಾಲಯದ ನ್ಯಾಯಧೀಶರಾದ ಅಮ್ಜದ್ ಅಲಿ ಶಾ ಅವರು, ಅಪರಾಧಿಗಳ ಚರ ಮತ್ತು ಸ್ತಿರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆಯೂ ತೀರ್ಪು ಪ್ರಕಟಿಸಿದರು. 47 ಮಂದಿಯನ್ನು ಈಗಾಗಲೇ ಅಪರಾಧಿಗಳೆಂದು ಘೋಷಿಸಲಾಗಿತ್ತು. ದಂಡ ಪಾವತಿಸದಿದ್ದರೆ ಹೆಚ್ಚುವರಿ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ.

ಪ್ರತಿಭಟನೆಯಲ್ಲಿ ನಡೆದ ವಿಧ್ವಂಸಕ ಕೃತ್ಯಗಳಿಗೆ ಈ 47 ಮಂದಿ ಪಿತೂರಿ ನಡೆಸಿದ್ದಾರೆ ಎಂದು ಜಂಟಿ ತನಿಖಾ ತಂಡವು ವರದಿ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.