ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2 ಪ್ರತ್ಯೇಕ ಕಾರ್ಯಾಚರಣೆ: 11 ಭಯೋತ್ಪಾದಕರನ್ನು ಹತ್ಯೆಗೈದ ಪಾಕ್ ಪಡೆ

Published 22 ಏಪ್ರಿಲ್ 2024, 16:20 IST
Last Updated 22 ಏಪ್ರಿಲ್ 2024, 16:20 IST
ಅಕ್ಷರ ಗಾತ್ರ

ಪೇಶಾವರ: ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಸೋಮವಾರ ನಡೆದ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಪಾಕಿಸ್ತಾನದ ಭದ್ರತಾ ಪಡೆ ಕನಿಷ್ಠ 11 ಭಯೋತ್ಪಾದಕರನ್ನು ಹತ್ಯೆಗೈದಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಮೊದಲ ಕಾರ್ಯಾಚರಣೆಯಲ್ಲಿ, ಪ್ರಾಂತ್ಯದ ಡೇರಾ ಇಸ್ಮಾಯಿಲ್ ಖಾನ್ ಅಭಯಾರಣ್ಯದಲ್ಲಿ ಭದ್ರತಾ ಪಡೆಗಳು ಒಟ್ಟು 10 ಭಯೋತ್ಪಾದಕರನ್ನು ಕೊಂದಿದ್ದಾರೆ. ಅವರಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪಾಕಿಸ್ತಾನ ಸೇನೆಯ ಮಾಧ್ಯಮ ವಿಭಾಗ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಾಂತ್ಯದ ಉತ್ತರ ವಜಿರಿಸ್ತಾನದಲ್ಲಿ ನಡೆದ ಮತ್ತೊಂದು ಕಾರ್ಯಾಚರಣೆಯಲ್ಲಿ ಭದ್ರತಾ ಪಡೆ ಒಬ್ಬ ಭಯೋತ್ಪಾದಕನನ್ನು ಹೊಡೆದುರುಳಿಸಿದೆ ಎಂದು ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT