ಇಸ್ಲಾಮಾಬಾದ್ (ಪಿಟಿಐ): ಸುಮಾರು ₹2 ಸಾವಿರ ಕೋಟಿಯ (190 ಮಿಲಿಯನ್ ಪೌಂಡ್) ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಹೈಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ.

ಭ್ರಷ್ಟಾಚಾರದ ಬೇರೆ ಬೇರೆ ಪ್ರಕರಣಗಳಲ್ಲಿ ಜೈಲು ಪಾಲಾಗಿರುವ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಶ್ರಾ ಬೀಬಿ ರಿಯಲ್ ಎಸ್ಟೇಟ್ ಉದ್ಯಮಿಯಿಂದ ಲಂಚವಾಗಿ ಕೋಟ್ಯಂತರ ರೂಪಾಯಿ ಮೌಲ್ಯದ ಭೂಮಿ ಪಡೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಇಸ್ಲಾಮಾಬಾದ್ ಹೈಕೋರ್ಟ್ನ ದ್ವಿಸದಸ್ಯ ಪೀಠವು ವಾದ-ಪ್ರತಿವಾದಗಳನ್ನು ಆಲಿಸಿದ ನಂತರ ಮಂಗಳವಾರ ತೀರ್ಪನ್ನು ಕಾಯ್ದಿರಿಸಿತ್ತು. ಬುಧವಾರ ನ್ಯಾಯಾಲಯವು, ಜಾಮೀನು ಪಡೆಯಲು ಇಮ್ರಾನ್ ಖಾನ್ ಅವರು 10 ಲಕ್ಷ ಪಾಕಿಸ್ತಾನಿ ರೂಪಾಯಿಗಳ ಶ್ಯೂರಿಟಿ ಬಾಂಡ್ ಸಲ್ಲಿಸುವಂತೆ ಸೂಚಿಸಿದೆ. ಇದ್ದತ್ ಮತ್ತು ಸೈಫರ್ ಪ್ರಕರಣಗಳಲ್ಲಿ ಇಮ್ರಾನ್ ಅವರಿಗೆ ನೀಡಲಾಗಿರುವ ಶಿಕ್ಷೆಯನ್ನು ಇನ್ನೂ ಅಮಾನತುಗೊಳಿಸದ ಕಾರಣ, ಮಾಜಿ ಪ್ರಧಾನಿಯನ್ನು ಅಡಿಯಾಲಾ ಜೈಲಿನಿಂದ ಬಿಡುಗಡೆ ಮಾಡಲು ಈ ಆದೇಶ ನೆರವಾಗುವುದಿಲ್ಲ. ಖಾನ್ ಅವರನ್ನು ಕಳೆದ ವರ್ಷದ ಆಗಸ್ಟ್ 1ರಿಂದ ರಾವಲ್ಪಿಂಡಿಯ ಅಡಿಯಾಲಾ ಜೈಲಿನಲ್ಲಿ ಇರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.