ಇಸ್ಲಾಮಾಬಾದ್: ಕೋವಿಡ್ ಸಾಂಕ್ರಾಮಿಕ ಪಿಡುಗಿನಿಂದಾಗಿ ಆರು ತಿಂಗಳಿಂದ ಮುಚ್ಚಿದ ಎಲ್ಲ ಶಾಲಾ–ಕಾಲೇಜುಗಳು ಬುಧವಾರದಿಂದ ಪಾಕಿಸ್ತಾನದಲ್ಲಿ ಪುನರಾರಂಭವಾಗಿವೆ.

ಕೊರೊನಾ ಸೋಂಕು ಹರಡುವುದನ್ನು ತಡೆಯುವ ಉದ್ದೇಶಗದಿಂದ ಸರ್ಕಾರ ಕೆಲವು ನಿರ್ಬಂಧಗಳನ್ನು ವಿಧಿಸಿದ್ದು, ಎಲ್ಲ ಶಾಲಾ – ಕಾಲೇಜುಗಳು ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಲಾಗಿದೆ.

ಶಾಲೆಗಳನ್ನು ಮುಚ್ಚಿದ್ದರಿಂದ ಬಹಳಷ್ಟು ತೊಂದರೆಯಾಗಿತ್ತು. ಈಗ ಅಧಿಕ ಸಂಖ್ಯೆಯಲ್ಲಿ ಮಕ್ಕಳು ದಾಖಲಾಗುವ ವಿಶ್ವಾಸವಿದೆ. ಕೊರೊನಾ ಸೋಂಕು ಹರಡುತ್ತಿರುವ ಬಗ್ಗೆ ಸಮಗ್ರವಾಗಿ ಪರಿಶೀಲನೆ ನಡೆಸಿದ ಬಳಿಕವೇ ಶೈಕ್ಷಣಿಕ ಸಂಸ್ಥೆಗಳನ್ನು ಪುನರಾರಂಭಿಸುವ ತೀರ್ಮಾನಕ್ಕೆ ಬರಲಾಗಿದೆ ಎಂದು ಶಿಕ್ಷಣ ಸಚಿವ ಶಫ್ಕತ್ ಮಹಮೂದ್ ಹೇಳಿದ್ದಾರೆ.

ಸೆಪ್ಟೆಂಬರ್ 15ರಿಂದ ಮೊದಲ ಹಂತದಲ್ಲಿ ಕೆಲವು ಶಿಕ್ಷಣ ಸಂಸ್ಥೆಗಳು ಆರಂಭವಾಗಿದ್ದವು. ಆ ಬಳಿಕ ಪತ್ತೆಯಾದ ಕೊರೊನಾ ಸೋಂಕು ಪ್ರಕರಣಗಳ ಪೈಕಿ ಶೇಕಡ ಒಂದರಷ್ಟು ಮಾತ್ರ ಶಿಕ್ಷಣ ಸಂಸ್ಥೆಗಳಲ್ಲಿ ಇದ್ದವರಲ್ಲಿ ಕಾಣಿಸಿಕೊಂಡಿವೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡೇ ಪ್ರಾಥಮಿಕ ಶಾಲೆಗಳನ್ನೂ ಆರಂಭಿಸಲು ತೀರ್ಮಾನಿಸಲಾಯಿತು ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.