ವಾಷಿಂಗ್ಟನ್: 2008ರ ಮುಂಬೈ ದಾಳಿಯಲ್ಲಿ ಕೈವಾಡವಿರುವ ಪಾಕಿಸ್ತಾನ ಮೂಲದ ಕೆನಡಾದ ಉದ್ಯಮಿ ತಹಾವ್ವುರ್ ರಾಣಾನನ್ನು ಭಾರತದ ಹಸ್ತಾಂತರ ಬೇಡಿಕೆ ಅನ್ವಯ ಲಾಸ್ ಏಂಜಲೀಸ್‌ನಲ್ಲಿ ಪೊಲೀಸರು ಪುನಃ ಬಂಧಿಸಿದ್ದಾರೆ. ಮುಂಬೈ ದಾಳಿಯಲ್ಲಿ 166 ಮಂದಿ ಮೃತಪಟ್ಟಿದ್ದರು.

ತನಗೆ ಕೋವಿಡ್–19 ದೃಢಪಟ್ಟಿದೆ ಎಂದು ರಾಣಾ ತಿಳಿಸಿದ್ದರಿಂದ, ಸಹಾನುಭೂತಿ ನೆಲೆಯಲ್ಲಿ ಆತನನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿತ್ತು.

ಘೋಷಿತ ಅಪರಾಧಿ ರಾಣಾನನ್ನು ವಶಕ್ಕೆ ನೀಡುವಂತೆ ಭಾರತ ಬೇಡಿಕೆ ಇಟ್ಟಿದ್ದರಿಂದ ಆತನನ್ನು ಮರಳಿ ವಶಕ್ಕೆ ಪಡೆಯಲಾಗಿದೆ. ಜೂನ್ 22ರೊಳಗೆ ಅರ್ಜಿ ಸಲ್ಲಿಸುವಂತೆ ರಾಣಾ ಪರ ವಕೀಲರಿಗೆ ಸೂಚಿಸಲಾಗಿದೆ. 26ರ ಒಳಗಾಗಿ ಪ್ರತಿಕ್ರಿಯೆ ಸಲ್ಲಿಸಲು ಸರ್ಕಾರಕ್ಕೆ ಸೂಚಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.