ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನ: ಮರು ಚುನಾವಣೆ ಕೋರಿದ್ದ ಅರ್ಜಿ ವಜಾ

Published 21 ಫೆಬ್ರುವರಿ 2024, 15:55 IST
Last Updated 21 ಫೆಬ್ರುವರಿ 2024, 15:55 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ಫೆಬ್ರುವರಿ 8ರ ಸಾರ್ವತ್ರಿಕ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿ ಬಂದಿರುವ ಕಾರಣ ಮರು ಚುನಾವಣೆ ನಡೆಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಪಾಕಿಸ್ತಾನದ ಸುಪ್ರೀಂ ಕೋರ್ಟ್‌ ಬುಧವಾರ ವಜಾಗೊಳಿಸಿದೆ.

ಪ್ರಚಾರಕ್ಕಾಗಿ ಈ ಅರ್ಜಿ ಸಲ್ಲಿಸಲಾಗಿದೆ ಎಂದಿರುವ ಮುಖ್ಯ ನ್ಯಾಯಮೂರ್ತಿ ಖಾಜಿ ಫಯಾಜ್‌ ಇಸಾ ಅವರನ್ನೊಳಗೊಂಡ ನ್ಯಾಯಪೀಠವು, ಅರ್ಜಿದಾರರಾದ ನಿವೃತ್ತ ಬ್ರಿಗೇಡಿಯರ್‌ ಅಲಿ ಖಾನ್‌ ಅವರಿಗೆ 5 ಲಕ್ಷ ಪಾಕಿಸ್ತಾನ ರೂಪಾಯಿ  (₹1.48 ಲಕ್ಷ) ದಂಡ ವಿಧಿಸಿದೆ. ಅಲಿ ಖಾನ್‌ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ.

ಮರು ಚುನಾವಣೆ ಕೋರಿರುವ ಅರ್ಜಿಯನ್ನು ತಿರಸ್ಕರಿಸುವ ಮೂಲಕ ನ್ಯಾಯಾಲಯವು, ಮೈತ್ರಿ ಸರ್ಕಾರ ರಚನೆಯ ಹಾದಿಯನ್ನು ಸುಗಮಗೊಳಿಸಿದೆ.

ನ್ಯಾಯಾಂಗದ ಮೇಲ್ವಿಚಾರಣೆಯಲ್ಲಿ 30 ದಿವಸಗಳೊಳಗೆ ಮರು ಚುನಾವಣೆ ನಡೆಸಬೇಕು ಎಂದು ಅಲಿ ಖಾನ್‌ ಅರ್ಜಿಯಲ್ಲಿ ಕೋರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT