ಕೈರೊ: ಪಾಕಿಸ್ತಾನ–ಅಫ್ಗಾನಿಸ್ತಾನ ನಡುವಣ ಸೇನಾ ಸಂಘರ್ಷದಿಂದಾಗಿ ಉಭಯ ದೇಶಗಳ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಇದರ ಬೆನ್ನಲ್ಲೇ ಉಭಯ ದೇಶಗಳು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಕತಾರ್ ಸರ್ಕಾರ ತಿಳಿಸಿದೆ

ದೋಹಾದಲ್ಲಿ ಕತಾರ್ ಮತ್ತು ಟರ್ಕಿಯ ಮಧ್ಯಸ್ಥಿಕೆಯಲ್ಲಿ ನಡೆದ ಮಾತುಕತೆಯ ವೇಳೆ ಪಾಕಿಸ್ತಾನ ಮತ್ತು ಅಫ್ಗಾನಿಸ್ತಾನ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಕತಾರ್ ವಿದೇಶಾಂಗ ಸಚಿವಾಲಯ ಪ್ರಕಟಣೆಯಲ್ಲಿ ಹೇಳಿದೆ.

ಪಾಕಿಸ್ತಾನ–ಅಫ್ಗಾನಿಸ್ತಾನ ಗಡಿಯಲ್ಲಿ ಕಳೆದೊಂದು ವಾರದಿಂದ ನಡೆದ ಘರ್ಷಣೆಯಲ್ಲಿ ಕನಿಷ್ಠ 23 ಸೈನಿಕರು ಮತ್ತು 200ಕ್ಕೂ ಹೆಚ್ಚು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಪಾಕಿಸ್ತಾನ ಸೇನೆ ತಿಳಿಸಿದೆ. ದಾಳಿಯಲ್ಲಿ 58 ಪಾಕಿಸ್ತಾನಿ ಸೈನಿಕರು ಮೃತಪಟ್ಟಿದ್ದು, ಸುಮಾರು 30 ಜನರು ಗಾಯಗೊಂಡಿದ್ದಾರೆ ಎಂದು ಅಫ್ಗನ್ನ ತಾಲಿಬಾನ್ ಸರ್ಕಾರ ಹೇಳಿಕೊಂಡಿದೆ.

ತಾಲಿಬಾನಿಗಳ ಮನವಿಯ ನಂತರ ಪಾಕಿಸ್ತಾನ ಸರ್ಕಾರ ಮತ್ತು ತಾಲಿಬಾನ್ ಆಡಳಿತದ ಅಫ್ಗಾನಿಸ್ತಾನ ಸರ್ಕಾರ ಬುಧವಾರ ಸಂಜೆ 6 ಗಂಟೆಯಿಂದ ಮುಂದಿನ 48 ಗಂಟೆಗಳವರೆಗೆ ತಾತ್ಕಾಲಿಕ ಕದನ ವಿರಾಮಕ್ಕೆ ನಿರ್ಧರಿಸಿದವು ಎಂದು ಪಾಕಿಸ್ತಾನದ ವಿದೇಶಾಂಗ ಇಲಾಖೆ ಹೇಳಿತ್ತು.

ಆದಾಗ್ಯೂ ಗಡಿಯಲ್ಲಿ ರಾತ್ರಿ ಮತ್ತು ಗುರುವಾರ ಬೆಳಗ್ಗೆ ಉಭಯ ದೇಶಗಳ ಸೇನೆಗಳ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಘಟನೆಯಲ್ಲಿ ನಾಗರಿಕರು ಸೇರಿ ಯೋಧರು ಹತರಾಗಿದ್ದರು.
.ಶಾಂತಿ ಅಥವಾ ಅರಾಜಕತೆ... ಆಯ್ಕೆ ನಿಮ್ಮದು: ಅಫ್ಗಾನ್ಗೆ ಪಾಕ್ ಸೇನಾ ಮುಖ್ಯಸ್ಥ.ಪಾಕ್–ಅಫ್ಗನ್ ಯುದ್ಧ ನಿಲ್ಲಿಸುವುದು ನನ್ನ ಮುಂದಿನ ಗುರಿ: ಡೊನಾಲ್ಡ್ ಟ್ರಂಪ್ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.