ಇಸ್ಲಾಮಾಬಾದನ್: ದ್ವಿಪಕ್ಷೀಯ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಪಾಕಿಸ್ತಾನದ ವಾಯುಪಡೆಯ ಮುಖ್ಯಸ್ಥ ಜಹೀರ್ ಅಹ್ಮದ್ ಬಾಬರ್ ಸಿಧು ಅವರು ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ.

ಇತ್ತೀಚೆಗೆ ಪಾಕಿಸ್ತಾನ ಸೇನಾ ಮುಖ್ಯಸ್ಥ ಅಸೀಮ್ ಮುನೀರ್ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಮಾತುಕತೆ ನಡೆಸಿದ ಬೆನ್ನಲ್ಲೇ ಪಾಕಿಸ್ತಾನದ ವಾಯುಪಡೆಯ ಮುಖ್ಯಸ್ಥರು ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ.

ಕಳೆದೊಂದು ದಶಕದಲ್ಲಿ ಪಾಕಿಸ್ತಾನ ವಾಯುಪಡೆಯ ಮುಖ್ಯಸ್ಥರ ಮೊದಲ ಅಮೆರಿಕ ಸಂದರ್ಶನ ಇದಾಗಿದೆ. ಈ ಭೇಟಿಯ ವೇಳೆ ದ್ವಿಪಕ್ಷೀಯ ಸಹಕಾರದೊಂದಿಗೆ ಮಿಲಿಟರಿ ಒಪ್ಪಂದಗಳು ಏರ್ಪಡುವ ಸಾಧ್ಯತೆಯಿದೆ.

ಈ ಉನ್ನತ ನಾಯಕರ ಭೇಟಿಯು ಪಾಕಿಸ್ತಾನ ಹಾಗೂ ಅಮೆರಿಕ ರಕ್ಷಣಾ ಪಾಲುದಾರಿಕೆಯಲ್ಲಿ ಹೊಸ ಮೈಲಿಗಲ್ಲು ಆಗಿರಲಿದೆ ಎನ್ನಲಾಗಿದೆ.

ಅಮೆರಿಕದ ಭೇಟಿಯ ವೇಳೆ ಪಾಕ್ನ ವಾಯುಪಡೆಯ ಮುಖ್ಯಸ್ಥರು ಅಮೆರಿಕದ ಉನ್ನತ ಮಿಲಿಟರಿ ಹಾಗೂ ರಾಜಕೀಯ ನಾಯಕರೊಂದಿಗೆ ಹಲವಾರು ಸಭೆಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.
.ಭಾರತದೊಂದಿಗೆ ಮಾತುಕತೆಗೆ ಸಿದ್ಧ: ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್.ಬಿನ್ ಲಾಡೆನ್ನನ್ನು ಮರೆತು ಬಿಟ್ರಾ..: ಟ್ರಂಪ್–ಮುನೀರ್ ಔತಣಕೂಟದ ಬಗ್ಗೆ ತರೂರ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.