ಕಾಬೂಲ್: ಅಫ್ಗಾನಿಸ್ತಾನದ ಪೂರ್ವ ಗಡಿ ಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಯಲ್ಲಿ 46 ನಾಗರಿಕರು ಮೃತಪಟ್ಟಿದ್ದಾರೆ ಎಂದು ತಾಲಿಬಾನ್ ಸರ್ಕಾರ ಬುಧವಾರ ತಿಳಿಸಿದೆ.

ಆದರೆ ಭಯೋತ್ಪಾದಕರ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಪಾಕಿಸ್ತಾನದ ಭದ್ರತಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಘಟನೆಯಿಂದ ಪಾಕಿಸ್ತಾನ ಹಾಗೂ ಅಫ್ಗಾನಿಸ್ತಾನ ದೇಶಗಳ ನಡುವೆ ಪ್ರಕ್ಷುಬ್ಧ ವಾತಾವಾರಣ ನಿರ್ಮಾಣವಾಗಿದೆ.

'ಪೂರ್ವ ಪಕ್ಟಿಕಾ ಪ್ರಾಂತ್ಯದ ಬರ್ಮಲ್ ಜಿಲ್ಲೆಯಲ್ಲಿ ಪಾಕಿಸ್ತಾನ ಬಾಂಬ್ ದಾಳಿ ನಡೆಸಿದೆ' ಎಂದು ಅಫ್ಗಾನಿಸ್ತಾನದ ತಾಲಿಬಾನ್ ಸರ್ಕಾರದ ವಕ್ತಾರ ತಿಳಿಸಿದ್ದಾರೆ.

'ಮೃತರ ಪೈಕಿ ಹೆಚ್ಚಿನವರು ಮಕ್ಕಳು ಹಾಗೂ ಮಹಿಳೆಯರಾಗಿದ್ದಾರೆ' ಎಂದು ಅವರು ಹೇಳಿದ್ದಾರೆ.

ಈ ಸಂಬಂಧ ಪಾಕಿಸ್ತಾನ ಸರ್ಕಾರದ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ.
.ಅಫ್ಗಾನಿಸ್ತಾನ: ಸೂಫಿ ಮಸೀದಿಯಲ್ಲಿ ಬಂದೂಕುಧಾರಿಯ ದಾಳಿಗೆ ಕನಿಷ್ಠ 10 ಮಂದಿ ಸಾವು.ಕಟಾಸ್ ರಾಜ್ ದೇಗುಲಗಳಿಗೆ ಭೇಟಿ ನೀಡಲು 84 ಭಾರತೀಯರಿಗೆ ಪಾಕಿಸ್ತಾನ ವಿಸಾ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.