ನವದೆಹಲಿ: ಭಾರತೀಯ ವಿಮಾನಗಳಿಗೆ ತನ್ನ ವಾಯುಪ್ರದೇಶದಲ್ಲಿನ ನಿರ್ಬಂಧವನ್ನು ಪಾಕಿಸ್ತಾನ ಮೇ 24ರವರೆಗೆ ವಿಸ್ತರಿಸಿದೆ.

ಭಾರತೀಯ ವಿಮಾನಯಾನ ಸಂಸ್ಥೆಗಳು ನಿರ್ವಹಿಸುವ ಯಾವುದೇ ವಿಮಾನಗಳು, ಭಾರತ ಒಡೆತನದ ಅಥವಾ ಗುತ್ತಿಗೆ ಪಡೆದ ವಿಮಾನಗಳಿಗೆ ಪಾಕಿಸ್ತಾನದ ವಾಯುಪ್ರದೇಶ ಬಳಸಲು ಅನುಮತಿಸಲಾಗುವುದಿಲ್ಲ ಎಂದು ಪಾಕಿಸ್ತಾನ ವಿಮಾನ ನಿಲ್ದಾಣ ಪ್ರಾಧಿಕಾರ (ಪಿಎಎ) ಪ್ರಕಟಣೆ ಹೊರಡಿಸಿದೆ.

ಕಳೆದ ವರ್ಷ ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಹಾಗೂ ಪಾಕಿಸ್ತಾನ ತಮ್ಮ ವಾಯುಪ್ರದೇಶ ಬಳಕೆಯನ್ನು ಮುಚ್ಚಿತ್ತು. ಏಪ್ರಿಲ್ 30ರಿಂದ ಪಾಕಿಸ್ತಾನ ಭಾರತದ ವಾಯುಪ್ರದೇಶವನ್ನು ಬಳಕೆ ಮಾಡುವುದನ್ನು ನಿಷೇಧಿಸಲಾಗಿತ್ತು.

ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತವು ಪಾಕಿಸ್ತಾನದ ಉಗ್ರರ ನೆಲೆಗಳನ್ನು ಗುರಿಯಾಗಿಸಿ 'ಆಪರೇಷನ್ ಸಿಂಧೂರ' ಹೆಸರಿನ ಕಾರ್ಯಾಚರಣೆಯನ್ನು ನಡೆಸಿತ್ತು. ಇದರಿಂದಾಗಿ ಉಭಯ ರಾಷ್ಟ್ರಗಳ ನಡುವೆ ಸಂಘರ್ಷ ಹಾಗೂ ಉದ್ವಿಗ್ನ ಸ್ಥಿತಿ ಉಂಟಾಗಿತ್ತು.
.US-Iran peace talks: ಸೌದಿ, ಕತಾರ್, ಟರ್ಕಿಗೆ ಪಾಕಿಸ್ತಾನ ಪ್ರಧಾನಿ ಷರೀಫ್ ಭೇಟಿ.ಇರಾನ್-ಅಮೆರಿಕ ಯುದ್ಧದಲ್ಲಿ ಪಾಕಿಸ್ತಾನ ಸಂಧಾನಕಾರನಾಗಿ ಹೊರಹೊಮ್ಮಿದ್ದು ಹೇಗೆ?.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.