ಇಸ್ಲಾಮಾಬಾದ್: ಸೇನಾ ಮುಖ್ಯಸ್ಥ ಆಸೀಂ ಮುನೀರ್ ಅವರ ಮೂರು ದಿನಗಳ ಇರಾನ್ ಭೇಟಿಯು ಯಶಸ್ವಿಯಾಗಿದೆ. ಟೆಹರಾನ್ನಲ್ಲಿ ಅವರು ಇರಾನ್ನ ಪ್ರಮುಖ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ಪಾಕಿಸ್ತಾನ ಸೇನೆಯ ವಕ್ತಾರರು ತಿಳಿಸಿದ್ದಾರೆ.

ಇರಾನ್ ಪ್ರವಾಸ ವೇಳೆ, ಅಲ್ಲಿನ ಪ್ರಮುಖ ನಾಯಕರೊಂದಿಗೆ ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಚರ್ಚಿಸಲಾಗಿದೆ. ಸಂಧಾನ ಮಾತುಕತೆಗೆ ಅವರನ್ನು ಒಪ್ಪಿಸಲಾಗಿದೆ ಎಂದು ಹೇಳಿದ್ದಾರೆ.

ಪಶ್ಚಿಮ ಏಷ್ಯಾ ಸಂಘರ್ಷವನ್ನು ಮಾತುಕತೆಯ ಮೂಲಕ ಇತ್ಯರ್ಥಪಡಿಸಿಕೊಳ್ಳುವ ಅಚಲವಾದ ಸಂಕಲ್ಪವನ್ನು ಪಾಕಿಸ್ತಾನ ಹೊಂದಿದೆ. ಆ ಮೂಲಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿ ಹೊಂದುವುದು ನಮ್ಮ ಗುರಿಯಾಗಿದೆ ಎಂದು ಹೇಳಿದ್ದಾರೆ.

ಅಮೆರಿಕ–ಇರಾನ್ ನಡುವಿನ ಕದನ ವಿರಾಮ ಮಾತುಕತೆಯಲ್ಲಿ ಪಾಕಿಸ್ತಾನವು ಮಧ್ಯಸ್ಥಿಕೆ ವಹಿಸಿತ್ತು. ಇಸ್ಲಾಮಾಬಾದ್ನಲ್ಲಿ ನಡೆದ 21 ಗಂಟೆಗಳ ಮಾತುಕತೆಯಲ್ಲಿ ಯಾವುದೇ ಅಂತಿಮ ನಿರ್ಧಾರಕ್ಕೆ ಬರಲು ವಿಫಲವಾಗಿತ್ತು. ಇದೀಗ ಮುನೀರ್ ಅವರು ಇರಾನ್ಗೆ ಭೇಟಿ ನೀಡಿರುವುದು ಅಮೆರಿಕ–ಇರಾನ್ ನಡುವೆ ಎರಡನೇ ಸುತ್ತಿನ ಮಾತುಕತೆ ನಡೆಯುವ ಕುರಿತು ಭರವಸೆ ಮೂಡಿಸಿದೆ.

ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಕೂಡ ಏ.15ರಿಂದ 18ರವರೆಗೆ ಸೌದಿ ಅರೇಬಿಯಾ, ಕತಾರ್ ಹಾಗೂ ಟರ್ಕಿಗೆ ಭೇಟಿ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.