ಇಸ್ಲಾಮಾಬಾದ್: ಭಾರತವು ಪಾಕಿಸ್ತಾನವನ್ನು ಗೌರವಿಸಬೇಕು ಹಾಗೂ ನಮ್ಮೊಂದಿಗೆ ಸಹಬಾಳ್ವೆಯಿಂದ ಇರುವುದನ್ನು ಕಲಿಯಬೇಕು ಎಂದು ಪಾಕಿಸ್ತಾನ ಸೇನೆ ಹೇಳಿದೆ.

ಭಾರತೀಯ ಸೇನಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರ ಇತ್ತೀಚಿನ ಹೇಳಿಕೆಗಳನ್ನು ಟೀಕಿಸಿರುವ ಸೇನೆಯು, ‘ಪಾಕಿಸ್ತಾನವನ್ನು ಗುರಿಯಾಗಿಸುವ ಯಾವುದೇ ಕ್ರಮ ಕೈಗೊಂಡಲ್ಲಿ, ಪರಿಣಾಮವನ್ನು ಎದುರಿಸಬೇಕಾಗುತ್ತದೆ’ ಎಂದೂ ಹೇಳಿದೆ.

ಪಾಕಿಸ್ತಾನವು ಭಯೋತ್ಪಾದಕರಿಗೆ ಆಶ್ರಯ ನೀಡಿ, ಭಾರತದ ವಿರುದ್ಧ ಕಾರ್ಯಾಚರಣೆ ನಡೆಸುವುದನ್ನು ಮುಂದುವರಿಸಿದರೆ, ಅದು ಭೂಗೋಳದ ಭಾಗವಾಗಿರಬೇಕೇ ಅಥವಾ ಇತಿಹಾಸದಲ್ಲಿ ಉಳಿಯಬೇಕೇ? ಬೇಡವೇ ಎಂಬುದನ್ನು ನಿರ್ಧರಿಸಲಿದ್ದೇವೆ’ ಎಂದು ದ್ವಿವೇದಿ ಅವರು ಎಚ್ಚರಿಕೆ ನೀಡಿದ್ದರು.
.ಪಾಕಿಸ್ತಾನ ಇತಿಹಾಸ ಸೇರಬೇಕೇ? ದ್ವಿವೇದಿ ಪ್ರಶ್ನೆ.
ಇದಕ್ಕೆ ಪ್ರತಿಕ್ರಿಯಿಸಿರುವ ಪಾಕಿಸ್ತಾನ ಸೇನೆಯು, ‘ದ್ವಿವೇದಿ ಹೇಳಿಕೆ ಪ್ರಚೋದನಕಾರಿಯಾಗಿದ್ದು, ಅಣ್ವಸ್ತ್ರ ಹೊಂದಿರುವ ದೇಶಗಳು ಜವಾಬ್ದಾರಿಯುತವಾಗಿ ಮತ್ತು ಸಂಯಮದಿಂದ ವರ್ತಿಸಬೇಕು. ಅಣ್ವಸ್ತ್ರ ಹೊಂದಿರುವ ನೆರೆಯ ದೇಶವನ್ನು ಭೌಗೋಳಿಕವಾಗಿ ನಾಶ ಮಾಡುವ ಬೆದರಿಕೆ ಹಾಕುವುದು ಅರಿವಿನ ಕೊರತೆಯಾಗಿದೆ’ ಎಂದು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.