ಕರಾಚಿ: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಆಪ್ತ ಹಾಗೂ ವಿರೋಧ ಪಕ್ಷದ ಮುಖಂಡ ಶಾ ಮೊಹಮ್ಮದ್ ಖುರೇಷಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಮೊಹಮ್ಮದ್ ಖುರೇಷಿ ಅವರು ಪಾಕಿಸ್ತಾನದ ಎರಡು ಬಾರಿ ವಿದೇಶಾಂಗ ಸಚಿವರಾಗಿದ್ದರು. ಇವರ ಬಂಧನಕ್ಕೆ ನಿರ್ದಿಷ್ಟ ಕಾರಣ ಗೊತ್ತಾಗಿಲ್ಲ ಎಂದು ಪಿಟಿಐ ಪಕ್ಷದ ವಕ್ತಾರ ಬುಖಾರಿ ತಿಳಿಸಿದ್ದಾರೆ.
ಪಾಕಿಸ್ತಾನದಲ್ಲಿನ ಸದ್ಯದ ರಾಜಕೀಯ ಬೆಳವಣಿಗೆ, ದಬ್ಬಾಳಿಕೆ, ಚುನಾವಣೆ ಅಕ್ರಮ, ವಿರೋಧ ಪಕ್ಷಗಳ ನಾಯಕರ ಬಂಧನದ ಬಗ್ಗೆ ಮೊಹಮ್ಮದ್ ಖುರೇಷಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದರು.
ಈ ಚುನಾವಣೆ ಸಂದರ್ಭದಲ್ಲಿ ತಮ್ಮ ಪಕ್ಷದ ನಿಲುವಿನ ಬಗ್ಗೆ ಸಹ ಮಾತನಾಡಿದ್ದರು. ಈ ಕಾರಣಕ್ಕಾಗಿ ಬಂಧಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.