ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನದಲ್ಲಿ ‘ಎಕ್ಸ್‌’ಗೆ ನಿರ್ಬಂಧ

Published 22 ಫೆಬ್ರುವರಿ 2024, 14:47 IST
Last Updated 22 ಫೆಬ್ರುವರಿ 2024, 14:47 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ಪಾಕಿಸ್ತಾನದಲ್ಲಿ ಸಾಮಾಜಿಕ ಜಾಲತಾಣ ವೇದಿಕೆ ’ಎಕ್ಸ್‌’ ಅನ್ನು ದೇಶದಾದ್ಯಂತ ನಿರ್ಬಂಧಿಸಿದ್ದು, ಆರನೇ ದಿನವಾದ ಗುರುವಾರವೂ ಸಹ ಬಳಕೆದಾರರಿಗೆ ಲಭ್ಯವಾಗಲಿಲ್ಲ.

ಮಾನವ ಹಕ್ಕುಗಳ ಕಾರ್ಯಕರ್ತರು ದೇಶದಲ್ಲಿ ನಿರ್ಬಂಧಿಸಿರುವ ಅಂತರ್ಜಾಲ ಸೇವೆಯನ್ನು ಪುನರ್ ಸ್ಥಾಪಿಸಬೇಕು, ಸಾಮಾಜಿಕ ಜಾಲತಾಣಗಳಿಗೆ ಯಾವುದೇ ನಿಷೇಧವಿರಬಾರದು ಎಂದು ಆಗ್ರಹಿಸಿವೆ. ಅಮೆರಿಕ ಸಹ ಇದಕ್ಕೆ ದನಿಗೂಡಿಸಿದೆ.

ಸರ್ಕಾರಿ ಅಧಿಕಾರಿಗಳು ಹಾಗೂ ಪಾಕಿಸ್ತಾನದ ದೂರಸಂಪರ್ಕ ಪ್ರಾಧಿಕಾರವು ನಿರ್ಬಂಧಕ್ಕೆ ಸಂಬಂಧಿಸಿದಂತೆ ಸುದ್ದಿಸಂಸ್ಥೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಪ್ರಕಟಗೊಂಡ ನಂತರ ನಡೆದ ರಾಜಕೀಯ ಬೆಳವಣಿಗೆಗಳ ಬಳಿಕ, ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ದೇಶದಾದ್ಯಂತ ಪ್ರತಿಭಟನೆಗೆ ಕರೆ ನೀಡಿದ ಬಳಿಕ ಸಾಮಾಜಿಕ ಜಾಲತಾಣಗಳನ್ನು ನಿರ್ಬಂಧಿಸಲಾಗಿತ್ತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT