ಕರಾಚಿ: ಪಾಕಿಸ್ತಾನದ ಪ್ರಕ್ಷುಬ್ಧ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಅರೆಸೈನಿಕ ಪಡೆಗಳ ಮೇಲೆ ನಡೆದ ಬಾಂಬ್ ದಾಳಿಯಲ್ಲಿ ಕನಿಷ್ಠ 10 ಜನರು ಸ್ಥಳದಲ್ಲೇ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕ್ವೆಟ್ಟಾದಲ್ಲಿರುವ ಪಾಕಿಸ್ತಾನದ ಅರೆಸೇನಾ ಪಡೆಗಳ ಪ್ರಧಾನ ಕಚೇರಿಯ ಬಳಿ ಸ್ಫೋಟ ಸಂಭವಿಸಿದೆ ಎಂದು ಬಲೂಚಿಸ್ತಾನದ ಆರೋಗ್ಯ ಸಚಿವ ಬಖ್ತ್ ಮುಹಮ್ಮದ್ ಕಾಕರ್ ಮಾಹಿತಿ ನೀಡಿದ್ದಾರೆ.

‘ಸ್ಫೋಟದಲ್ಲಿ ಹತ್ತು ಮಂದಿ ಸಾವಿಗೀಡಾಗಿದ್ದು, 32 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಅವರು ಹೇಳಿದ್ದಾರೆ.

ಸ್ಫೋಟಕ ಫೋಟೊ ಮತ್ತು ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಆದರೆ, ದಾಳಿಯ ಹೊಣೆಯನ್ನು ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ.

‘ಇದೊಂದು ಭಯೋತ್ಪಾದಕ ದಾಳಿಯಾಗಿದೆ. ಭಯೋತ್ಪಾದಕರು ಹೇಡಿತನದ ಕೃತ್ಯಗಳ ಮೂಲಕ ರಾಷ್ಟ್ರದ ದೃಢಸಂಕಲ್ಪವನ್ನು ದುರ್ಬಲಗೊಳಿಸಲು ಸಾಧ್ಯವಿಲ್ಲ. ಜನರು ಮತ್ತು ಭದ್ರತಾ ಪಡೆಗಳ ತ್ಯಾಗ ವ್ಯರ್ಥವಾಗುವುದಿಲ್ಲ. ಬಲೂಚಿಸ್ತಾನವನ್ನು ಶಾಂತಿಯುತ ಮತ್ತು ಸುರಕ್ಷಿತವಾಗಿರಿಸಲು ನಾವು ಬದ್ಧರಾಗಿದ್ದೇವೆ’ ಎಂದು ಬಲೂಚಿಸ್ತಾನ ಮುಖ್ಯಮಂತ್ರಿ ಮೀರ್ ಸರ್ಫರಾಜ್ ಅವರು ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.