ಇಸ್ಲಾಮಾಬಾದ್: ‘ಕಳೆದ ಎರಡು ವರ್ಷಗಳಲ್ಲಿ ಪಾಕಿಸ್ತಾನ ಆರ್ಥಿಕವಾಗಿ ಸಾಕಷ್ಟು ಪ್ರಗತಿ ಸಾಧಿಸಿತ್ತು. ಅಮೆರಿಕ–ಇರಾನ್ ನಡುವಿನ ಯುದ್ಧದಿಂದ ದೇಶದ ಅರ್ಥ ವ್ಯವಸ್ಥೆಗೆ ಭಾರಿ ಪೆಟ್ಟು ಬಿದ್ದಿದೆ’ ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್ ಬುಧವಾರ ಹೇಳಿದ್ದಾರೆ.

‘ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ಫೆಬ್ರುವರಿಯಲ್ಲಿ ದಾಳಿ ಆರಂಭಿಸಿದಾಗಿನಿಂದ ಜಾಗತಿಕ ಮಾರುಕಟ್ಟೆಗಳಲ್ಲಿ ಇಂಧನ ದರದಲ್ಲಿ ವಿಪರೀತ ಹೆಚ್ಚಳವಾಗುತ್ತಿದೆ. ಇದರಿಂದ ಇಂಧನಕ್ಕಾಗಿ ಪಾಕಿಸ್ತಾನ ಮಾಡುತ್ತಿರುವ ವೆಚ್ಚವೂ ಹೆಚ್ಚುತ್ತಿದೆ’ ಎಂದು ಹೇಳಿದ್ದಾರೆ.

ಸಚಿವ ಸಂಪುಟ ಸಭೆಯಲ್ಲಿ ಮಾತನಾಡಿದ ಅವರು, ಯುದ್ಧದಿಂದಾಗಿ ಉದ್ಭವಿಸಿರುವ ಪರಿಸ್ಥಿತಿ ಮೇಲೆ ಕಾರ್ಯಪಡೆಯೊಂದು ನಿಗಾ ವಹಿಸಿದೆ ಎಂದು ಶರೀಫ್ ಹೇಳಿದ್ದಾಗಿ ಜಿಯೊ ಟಿವಿ ವರದಿ ಮಾಡಿದೆ.

‘ಇಂಥ ಹಿನ್ನಡೆ ಹೊರತಾಗಿಯೂ ಯುದ್ಧ ನಿರತ ದೇಶಗಳ ನಡುವೆ ಮಾತುಕತೆಗೆ ವೇದಿಕೆ ಕಲ್ಪಿಸಿ, ಪಶ್ಚಿಮ ಏಷ್ಯಾದಲ್ಲಿ ಶಾಂತಿ ನೆಲಸುವಂತೆ ಮಾಡುವುದಕ್ಕೆ ನನ್ನ ಸರ್ಕಾರ ಪ್ರಯತ್ನ ಮುಂದುವರಿಸಲಿದೆ’ ಎಂದು ಸಭೆಗೆ ತಿಳಿಸಿದ್ದಾರೆ.

ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಮಾತುಕತೆಯಲ್ಲಾದ ಪ್ರಗತಿ ಕುರಿತು ಸಭೆಗೆ ವಿವರಿಸಿದ ಶರೀಫ್, ‘ಉಭಯ ದೇಶಗಳ ನಡುವೆ ಎರಡನೇ ಸುತ್ತಿನ ಮಾತುಕತೆಯನ್ನು ಶೀಘ್ರವೇ ಆಯೋಜಿಸಲು ಪಾಕಿಸ್ತಾನ ಯೋಜಿಸಿದೆ. ಬಿಕ್ಕಟ್ಟು ಕೊನೆಗೊಂಡು ಪಶ್ಚಿಮ ಏಷ್ಯಾದಲ್ಲಿ ಶಾಂತಿ ನೆಲಸುವ ವಿಶ್ವಾಸ ಇದೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.