ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನ | ಇಮ್ರಾನ್ ಖಾನ್ ನಾಮಪತ್ರ ತಿರಸ್ಕರಿಸಿದ ಚುನಾವಣಾ ಆಯೋಗ

Published 30 ಡಿಸೆಂಬರ್ 2023, 12:22 IST
Last Updated 30 ಡಿಸೆಂಬರ್ 2023, 12:22 IST
ಅಕ್ಷರ ಗಾತ್ರ

ಕರಾಚಿ: ಪಾಕಿಸ್ತಾನ ಚುನಾವಣಾ ಆಯೋಗವು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ನಾಮಪತ್ರವನ್ನು ತಿರಸ್ಕರಿಸಿದೆ.

ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ 2024ರಲ್ಲಿ ನಡೆಯಲಿದೆ. ಇದರಲ್ಲಿ ಖಾನ್ ಅವರ ಪಾಕಿಸ್ತಾನ ತೆಹರೀಕ್‌ ಇ–ಇನ್ಸಾಫ್‌ (ಪಿಟಿಐ) ಪಕ್ಷವು ಸ್ಪರ್ಧಿಸಲು ಸಿದ್ಧತೆ ನಡೆಸಿದೆ. ಜೈಲಿನಲ್ಲಿರುವ ಇಮ್ರಾನ್ ಖಾನ್ ಅವರ ಧ್ವನಿಯನ್ನು ಕೃತಕ ಬುದ್ಧಿಮತ್ತೆ ತಂತ್ರಜ್ಞಾನದಲ್ಲಿ ಬಳಸಿ ಹಲವೆಡೆ ಪ್ರಚಾರ ಕಾರ್ಯಗಳೂ ನಡೆದಿವೆ. ಇದರ ನಡುವೆ ಇಮ್ರಾನ್ ಅವರ ನಾಮಪತ್ರವನ್ನು ಅಲ್ಲಿನ ಚುನಾವಣಾ ಆಯೋಗ ತಿರಸ್ಕರಿಸಿರುವುದಾಗಿ ಶನಿವಾರ ಹೇಳಿದೆ.

ಭ್ರಷ್ಟಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಜೈಲು ಸೇರಿರುವ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರನ್ನು ಐದು ವರ್ಷಗಳವರೆಗೆ ಚುನಾವಣೆಗಳಲ್ಲಿ ಸ್ಪರ್ಧಿಸದಂತೆ ಪಾಕಿಸ್ತಾನ ಚುನಾವಣಾ ಆಯೋಗವು ಕಳೆದ ಆಗಸ್ಟ್‌ನಲ್ಲಿ ನಿರ್ಬಂಧ ವಿಧಿಸಿತ್ತು.

ಪ್ರಧಾನಿಯಾಗಿದ್ದಾಗ ವಿದೇಶಿ ಗಣ್ಯರಿಂದ ಉಡುಗೊರೆಯಾಗಿ ಪಡೆದಿದ್ದ ದುಬಾರಿ ವಸ್ತುಗಳನ್ನು ಸರ್ಕಾರಿ ಅಧಿಕಾರಿಗಳಿಗೆ ಮಾರಾಟ ಮಾಡಿದ್ದ ಆರೋಪ ಇಮ್ರಾಖ್‌ ಖಾನ್‌ ವಿರುದ್ಧ ಕೇಳಿಬಂದಿತ್ತು. ಈ (ತೊಶಖಾನ ಭ್ರಷ್ಟಾಚಾರ) ಪ್ರಕರಣದ ವಿಚಾರಣೆ ನಡೆಸಿದ್ದ ಇಸ್ಲಾಮಾಬಾದ್‌ನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯವು, ಅವರಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಕೋರ್ಟ್ ಆದೇಶವನ್ನು ಪರಿಗಣಿಸಿ ಸಂವಿಧಾನದ 63 (1)(ಎಚ್‌) ವಿಧಿ ಹಾಗೂ 2017ರ ಚುನಾವಣಾ ಕಾಯ್ದೆಯ 232ನೇ ಸೆಕ್ಷನ್‌ ಅನ್ವಯ ಇಮ್ರಾನ್‌ ಖಾನ್‌ ಅವರನ್ನು ಐದು ವರ್ಷಗಳವರೆಗೆ ಚುನಾವಣೆಗಳಲ್ಲಿ ಸ್ಪರ್ಧಿಸದಂತೆ ಅನರ್ಹಗೊಳಿಸಲಾಗಿದೆ ಎಂದು ಚುನಾವಣಾ ಆಯೋಗ ಹೇಳಿಕೆ ಬಿಡುಗಡೆ ಮಾಡಿತ್ತು.

ವಿಚಾರಣಾ ನ್ಯಾಯಾಲಯ ತಮ್ಮ ವಿರುದ್ಧ ನೀಡಿರುವ ತೀರ್ಪನ್ನು ಪ್ರಶ್ನಿಸಿ ಖಾನ್‌, ಇಸ್ಲಾಮಾಬಾದ್‌ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT