ಇಸ್ಲಾಮಾಬಾದ್: ದಿತ್ವಾ ಚಂಡಮಾರುತದಿಂದ ತತ್ತರಿಸಿರುವ ದ್ವೀಪ ರಾಷ್ಟ್ರ ಶ್ರೀಲಂಕಾಕ್ಕೆ ಅವಧಿ ಮೀರಿದ ಪರಿಹಾರ ಪ್ಯಾಕೇಜ್ ರವಾನಿಸುವ ಮೂಲಕ ಪಾಕಿಸ್ತಾನವು ಜಗತ್ತಿನ ಎದುರು ಭಾರಿ ಮುಖಭಂಗಕ್ಕೊಳಗಾಗಿದೆ.

ಚಂಡಮಾರುತದಿಂದ ಶ್ರೀಲಂಕಾದಲ್ಲಿ ದಿಢೀರ್ ಪ್ರವಾಹ ಉಂಟಾಗಿದ್ದು, ಅಪಾರ ಜೀವ, ಆಸ್ತಿ ಹಾನಿಯಾಗಿದೆ. ಭಾರತ ಸೇರಿದಂತೆ ಹಲವು ದೇಶಗಳು ಶ್ರೀಲಂಕಾಕ್ಕೆ ನೆರವಿನ ಹಸ್ತ ಚಾಚಿವೆ. ಪಾಕಿಸ್ತಾನವೂ ಆಹಾರ ಸಾಮಾಗ್ರಿಗಳನ್ನೊಳಗೊಂಡ ಪರಿಹಾರ ಪ್ಯಾಕೇಜ್ ಅನ್ನು ಕಳುಹಿಸಿತ್ತು.

ಈ ಬಗ್ಗೆ ಫೋಟೊದೊಂದಿಗೆ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದ ಶ್ರೀಲಂಕಾದಲ್ಲಿರುವ ಪಾಕಿಸ್ತಾನ ರಾಜತಾಂತ್ರಿಕ ಕಚೇರಿ, ‘ಶ್ರೀಲಂಕಾದಲ್ಲಿರುವ ಸಹೋದರ–ಸಹೋದರಿಯರಿಗೆ ಪಾಕಿಸ್ತಾನವು ಸಹಾಯಹಸ್ತ ಚಾಚಿದೆ’ ಎಂದು ಬರೆದುಕೊಂಡಿತ್ತು. ಆದರೆ, ಫೋಟೊದಲ್ಲಿರುವ ಆಹಾರ ಪೊಟ್ಟಣದಲ್ಲಿ ಬಳಕೆಯ ಅವಧಿ(ಎಕ್ಸ್ಪೈರಿ ಡೇಟ್) ‘10/2024’ ಎಂದು ನಮೂದಾಗಿರುವುದು ಎಲ್ಲರ ಗಮನ ಸೆಳೆದಿದೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಟೀಕೆ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತ ರಾಜತಾಂತ್ರಿಕ ಕಚೇರಿ, ತಕ್ಷಣ ಪೋಸ್ಟ್ ಅನ್ನು ಅಳಿಸಿ ಹಾಕಿದೆ.

ಏತನ್ಮಧ್ಯೆ, ಪರಿಹಾರ ಪ್ಯಾಕೇಜ್ ಅನ್ನು ಶ್ರೀಲಂಕಾಕ್ಕೆ ರವಾನಿಸಲು ಪಾಕಿಸ್ತಾನ ವಿಮಾನಕ್ಕೆ ತನ್ನ ವಾಯುಪ್ರದೇಶದ ಮೂಲಕ ಹಾದುಹೋಗಲು ಭಾರತ ಅನುವು ಮಾಡಿಕೊಟ್ಟಿತ್ತು.

ಪ್ರವಾಹ ಪೀಡಿತ ಶ್ರೀಲಂಕಾಕ್ಕೆ ‘ಆಪರೇಷನ್ ಸಾಗರ ಬಂಧು’ ಅಡಿಯಲ್ಲಿ ಭಾರತವು 53 ಟನ್ ಪರಿಹಾರ ಸಾಮಾಗ್ರಿಗಳನ್ನು ಕಳುಹಿಸಿದೆ. ಐವರು ವೈದ್ಯರು ಸೇರಿದಂತೆ ಎನ್ಡಿಆರ್ಎಫ್ನ 80 ಮಂದಿಯ ತುಕಡಿಯನ್ನು ರಕ್ಷಣಾ ಮತ್ತು ಪರಿಹಾರ ಕಾರ್ಯಕ್ಕೆ ಶ್ರೀಲಂಕಾಕ್ಕೆ ಕಳುಹಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.