ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪಾಕಿಸ್ತಾನದಲ್ಲಿ ಪ್ರವಾಹ: ಮೋದಿ ಕಾಳಜಿಗೆ ಧನ್ಯವಾದ ಸಲ್ಲಿಸಿದ ಪಾಕ್ ಪ್ರಧಾನಿ

Last Updated 1 ಸೆಪ್ಟೆಂಬರ್ 2022, 4:10 IST
ಅಕ್ಷರ ಗಾತ್ರ

ನವದೆಹಲಿ: ಪಾಕಿಸ್ತಾನದಲ್ಲಿ ಭೀಕರ ಪ್ರವಾಹದಿಂದ ಅಪಾರ ನಾಶ-ನಷ್ಟ ಉಂಟಾಗಿದೆ. ಈ ಕುರಿತು ಕಾಳಜಿ ವಹಿಸಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಾಕಿಸ್ತಾನದ ಪ್ರಧಾನ ಮಂತ್ರಿ ಶೆಹಬಾಜ್‌ ಷರೀಫ್‌ ಧನ್ಯವಾದ ಸಲ್ಲಿಸಿದ್ದಾರೆ.

ಪಾಕಿಸ್ತಾನದಲ್ಲಿ ಪ್ರವಾಹದಿಂದಾಗಿ ಉಂಟಾಗಿರುವ ಹಾನಿ ಕುರಿತುಸಂತಾಪ ಸೂಚಿಸಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾನು ಧನ್ಯವಾದ ಸಲ್ಲಿಸುತ್ತೇನೆ. ಈ ನೈಸರ್ಗಿಕ ವಿಕೋಪದ ಪ್ರತಿಕೂಲ ಪರಿಣಾಮವನ್ನು ಎದುರಿಸಿ ಪಾಕಿಸ್ತಾನ ಜನತೆ ಸಹಜ ಸ್ಥಿತಿಗೆ ಮರಳುವ ನಂಬಿಕೆಯಿದೆ ಎಂದು ಹೇಳಿದ್ದಾರೆ.



ಪ್ರಧಾನಿ ಮೋದಿ ತಮ್ಮ ಸಂದೇಶದಲ್ಲಿ, ಪಾಕಿಸ್ತಾನದಲ್ಲಿ ಪ್ರವಾಹದಿಂದ ಉಂಟಾಗಿರುವ ಹಾನಿಯನ್ನು ನೋಡಿ ತುಂಬಾ ಬೇಸರವಾಗಿದೆ. ಈ ನೈಸರ್ಗಿಕ ವಿಕೋಪದಿಂದ ಸಂತ್ರಸ್ತರು, ಗಾಯಗೊಂಡವರು ಮತ್ತು ಮೃತಪಟ್ಟವರ ಕುಟುಂಬಗಳಿಗೆ ನಾವು ಸಂತಾಪ ಸೂಚಿಸುತ್ತೇವೆ. ಪಾಕಿಸ್ತಾನ ಶೀಘ್ರದಲ್ಲೇ ಸಹಜ ಸ್ಥಿತಿ ಮರಳುವ ವಿಶ್ವಾಸವಿದೆ ಎಂದು ಹೇಳಿದ್ದರು.

ಪಾಕಿಸ್ತಾನದಲ್ಲಿ ಪ್ರವಾಹದಿಂದಾಗಿ ಈವರೆಗೆ 1,100ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT