ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್‌ ಸಾರ್ವತ್ರಿಕ ಚುನಾವಣೆ: ಮತದಾನ ಆರಂಭ, ಮೊಬೈಲ್‌ ಸೇವೆ ಸ್ಥಗಿತ

Published 8 ಫೆಬ್ರುವರಿ 2024, 3:31 IST
Last Updated 8 ಫೆಬ್ರುವರಿ 2024, 3:31 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆಯ ಮತದಾನ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ತಡೆಯಲು ದೇಶದಾದ್ಯಂತ ತಾತ್ಕಾಲಿಕವಾಗಿ ಮೊಬೈಲ್‌ ಸೇವೆಯನ್ನು ನಿರ್ಬಂಧಿಸಲಾಗಿದೆ ಎಂದು ಪಾಕಿಸ್ತಾನ ಆಂತರಿಕ ಸಚಿವಾಲಯ ತಿಳಿಸಿದೆ.

ದೇಶದಾದ್ಯಂತ ಮೊಬೈಲ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ಸಚಿವಾಲಯದ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿಗೆ ನಡೆದ ದಾಳಿಗಳಲ್ಲಿ ‘ಅಮೂಲ್ಯ ಜೀವಗಳು ಕಳೆದುಹೋಗಿವೆ’ ಅಲ್ಲದೆ ‘ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಮತ್ತು ಸಂಭಾವ್ಯ ಬೆದರಿಕೆಗಳನ್ನು ಎದುರಿಸಲು ಭದ್ರತಾ ಕ್ರಮಗಳು ಅತ್ಯಗತ್ಯ’ ಹೀಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವಕ್ತಾರರು ಹೇಳಿದ್ದಾರೆ.

ಬೆಳಿಗ್ಗೆ 8 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸಂಜೆ 5 ಗಂಟೆಗೆ ಮುಕ್ತಾಯಗೊಳ್ಳಲಿದೆ. ಚುನಾವಣೆ ಇರುವ ಕಾರಣ ದೇಶದಾದ್ಯಂತ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.

ಪಾಕಿಸ್ತಾನ ಚುನಾವಣಾ ಆಯೋಗದ ಪ್ರಕಾರ, 4,807 ಪುರುಷರು, 312 ಮಹಿಳೆಯರು ಮತ್ತು ಇಬ್ಬರು ಲಿಂಗತ್ವ ಅಲ್ಪಸಂಖ್ಯಾತರು ಸೇರಿ 5,121 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. 

ಬುಧವಾರ ನೈಋತ್ಯ ಪಾಕಿಸ್ತಾನದಲ್ಲಿ ಅಭ್ಯರ್ಥಿಗಳ ಕಚೇರಿಯ ಹೊರಗೆ ಅವಳಿ ಬಾಂಬ್ ಸ್ಫೋಟ ಸಂಭವಿಸಿ ಕನಿಷ್ಠ 28 ಜನರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT