ಇಸ್ಲಾಮಾಬಾದ್ (ಪಿಟಿಐ): ‘ಜಗತ್ತಿನ ಜವಾಬ್ದಾರಿಯುತ ರಾಷ್ಟ್ರವಾಗಿ ಗುರುತಿಸಿಕೊಂಡಿದ್ದು, ಜಾಗತಿಕ ಶಾಂತಿ ಹಾಗೂ ಸ್ಥಿರತೆಯ ಖಾತರಿಯಾಗಿಯೂ ಹೊರಹೊಮ್ಮಿದ್ದೇವೆ’ ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿಕೊಂಡಿದ್ದಾರೆ.

ಕಳೆದ ವರ್ಷ ಭಾರತದೊಂದಿಗಿನ ನಾಲ್ಕು ದಿನಗಳ ಸಂಘರ್ಷಕ್ಕೆ ಇಸ್ಲಾಮಾಬಾದ್ ನೀಡಿದ ಹೆಸರು ‘ಮರ್ಕ್– ಎ– ಹಕ್’ನ ಮೊದಲ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ಕಚೇರಿಯು ಶನಿವಾರ ರಾತ್ರಿ ಬಿಡುಗಡೆ ಮಾಡಿರುವ ಸಂದೇಶದಲ್ಲಿ ಈ ವಿಷಯ ಉಲ್ಲೇಖಿಸಿದ್ದಾರೆ.

‘ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷವನ್ನು ಶಾಂತಿಯುತವಾಗಿ ಬಗೆಹರಿಸುವ ತನ್ನ ಪ್ರಯತ್ನಗಳಿಗೆಪಾಕಿಸ್ತಾನ ಬದ್ಧವಾಗಿದೆ’ ಎಂದೂ ತಿಳಿಸಿದ್ದಾರೆ.

‘ಭೂಮಿ, ಸಮುದ್ರ, ವಾಯು ಹಾಗೂ ಸೈಬರ್ ಕ್ಷೇತ್ರಗಳಲ್ಲಿ ಪಾಕಿಸ್ತಾನದ ಪಡೆಗಳ ಸಂಘಟಿತ ಪ್ರತಿಕ್ರಿಯೆಯು ದೇಶದ ರಕ್ಷಣಾ ಸಾಮರ್ಥ್ಯ ಹಾಗೂ ರಾಷ್ಟ್ರೀಯ ಸಂಕಲ್ಪವನ್ನು ಬಲಪಡಿಸಿದೆ’ ಎಂದು ಹೇಳಿದ್ದಾರೆ.

‘ನಮ್ಮ ವಿರುದ್ಧ ಯಾವುದೇ ದಾಳಿ ನಡೆದರೂ ಪ್ರತ್ಯುತ್ತರ ನೀಡಲಾಗುವುದು’ ಎಂದು ಎಚ್ಚರಿಸಿರುವ ಶೆಹಬಾಜ್, ‘ತನ್ನನ್ನು ಹೇಗೆ ರಕ್ಷಿಸಿಕೊಳ್ಳಬೇಕು ಎಂಬುದು ಪಾಕ್ಗೆ ಗೊತ್ತಿದೆ’ ಎಂದಿದ್ದಾರೆ.

ಭಾರತದೊಂದಿಗಿನ ಸಂಘರ್ಷದ ಸಮಯದಲ್ಲಿ ಸಶಸ್ತ್ರ ಪಡೆಗಳು ನಡೆಸಿದ ಹೋರಾಟ, ವಹಿಸಿದ ಪಾತ್ರವನ್ನು ಶೆಹಬಾಜ್ ಶ್ಲಾಘಿಸಿದ್ದು, ‘ಭಯೋತ್ಪಾದನೆ ವಿರುದ್ಧ ಪಾಕ್ ಹೋರಾಡಲಿದೆ ಹಾಗೂ ತನ್ನ ಗಡಿಯಲ್ಲಿ ಜಾಗರೂಕತೆಯನ್ನು ಕಾಪಾಡಿಕೊಳ್ಳಲಿದೆ’ ಎಂದು ತಮ್ಮ ಸಂದೇಶದಲ್ಲಿ ಪ್ರಸ್ತಾಪಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-51-1855924475

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.