ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದ್ರೋಹ ಪ್ರಕರಣ: ಪಾಕಿಸ್ತಾನದ ವಕೀಲ, ಮಾಜಿ ಸಂಸದ ಪೊಲೀಸ್ ವಶಕ್ಕೆ

Published 21 ಆಗಸ್ಟ್ 2023, 14:31 IST
Last Updated 21 ಆಗಸ್ಟ್ 2023, 14:31 IST
ಅಕ್ಷರ ಗಾತ್ರ

ಇಸ್ಲಾಮಾಬಾದ್: ದೇಶದ್ರೋಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ವಿಚಾರಣೆ ನಡೆಸಿದ ಭಯೋತ್ಪಾದನೆ ವಿರೋಧಿ ನ್ಯಾಯಾಲಯವು ಪಾಕಿಸ್ತಾನದ ಮಾನವ ಹಕ್ಕುಗಳ ವಕೀಲೆ ಇಮಾನ್ ಮಜಾರಿ ಮತ್ತು ಮಾಜಿ ಸಂಸದ ಅಲಿ ವಜೀರ್ ಅವರನ್ನು ಮೂರು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿದೆ.

ಪಶ್ತೂನ್‌ಗಳ ಹಕ್ಕುಗಳನ್ನು ಪ್ರತಿಪಾದಿಸುವ ಪಶ್ತೂನ್ ತಹಫೂಜ್ ಚಳವಳಿ (ಪಿಟಿಎಂ) ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾರಣ ಮಾನವ ಹಕ್ಕುಗಳ ಮಾಜಿ ಸಚಿವ ಶಿರೀನ್ ಮಜಾರಿ ಅವರ ಪುತ್ರಿ ಇಮಾನ್, ವಜೀರ್ ಅವರನ್ನು ಇಸ್ಲಾಮಾಬಾದ್ ಪೊಲೀಸರು ಭಾನುವಾರ ಬೆಳಿಗ್ಗೆ ಬಂಧಿಸಿದ್ದರು.

ಇಬ್ಬರೂ ಕಾನೂನುಬಾಹಿರ ಸಭೆ ನಡೆಸಿರುವುದು, ಪ್ರತಿರೋಧ ಮತ್ತು ರಾಜ್ಯದ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಮುಂದಿನ ವಿಚಾರಣೆಯನ್ನು ಆ.24ಕ್ಕೆ ನಿಗದಿಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT