ಈ ಸಂದರ್ಭದಲ್ಲಿ ಶೆಹಬಾಜ್ ಷರೀಫ್ ಅವರು, ಶಾಂತಿ ಸ್ಥಾಪನೆಯ ನಿಟ್ಟಿನಲ್ಲಿ ಪ್ರಾಮಾಣಿಕ ಮಧ್ಯಸ್ಥಿಕೆ ವಹಿಸುವ ತಮ್ಮ ಬದ್ಧತೆಯ ಬಗ್ಗೆ ಒತ್ತಿ ಹೇಳಿದರು.

ಸುದೀರ್ಘ 50 ನಿಮಿಷ ಮಾತನಾಡಿದ ಉಭಯ ದೇಶಗಳ ನಾಯಕರು, ಪ್ರಸಕ್ತ ಪ್ರಾದೇಶಿಕ ಸ್ಥಿತಿಗತಿ ಮತ್ತು ಶಾಂತಿ, ಸ್ಥಿರತೆ ಕಾಪಾಡುವ ನಿಟ್ಟಿನಲ್ಲಿ ನಡೆಯುತ್ತಿರುವ ಪ್ರಯತ್ನಗಳ ಕುರಿತು ವಿಸ್ತೃತವಾಗಿ ಚರ್ಚಿಸಿದರು.

ಶಾಂತಿ ಸ್ಥಾಪನೆಗೆ ಸತತವಾಗಿ ಪ್ರಯತ್ನಿಸುತ್ತಿರುವ ಪಾಕಿಸ್ತಾನದ ಪ್ರಧಾನಿ ಶೆಹಬಾಜ್, ಫೀಲ್ಡ್ ಮಾರ್ಷಲ್ ಆಸೀಮ್ ಮುನೀರ್ ಮತ್ತು ಉಪಪ್ರಧಾನಿ ಇಶಾಕ್ ಡಾರ್ ಅವರಿಗೆ ಪೆಜೆಶ್ಕಿಯಾನ್ ಅವರು ಧನ್ಯವಾದ ತಿಳಿಸಿದರು.

ಶಾಂತಿ ಮಾತುಕತೆಗೆ ಸಂಬಂಧಿಸಿದಂತೆ ಇರಾನ್ ಅಭಿಪ್ರಾಯವನ್ನು ವ್ಯಕ್ತಪಡಿಸಿದ ಅವರು, ಇರಾನ್–ಪಾಕಿಸ್ತಾನ ನಡುವಣ ಸಂಬಂಧವು ಭವಿಷ್ಯದಲ್ಲಿ ಮತ್ತಷ್ಟು ಬಲಗೊಳ್ಳಲಿದೆ ಎಂದು ಹೇಳಿದರು.

ಲೆಬನಾನ್ ಮೇಲೆ ಇಸ್ರೇಲ್ ದಾಳಿ: ಇರಾನ್ ಬೆಂಬಲಿತ ಹಿಜ್ಬುಲ್ಲಾ ಸಂಘಟನೆಯು ಕದನ ವಿರಾಮವನ್ನು ಉಲ್ಲಂಘಿಸಿದೆ ಎಂದು ಆರೋಪಿಸಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಹಿಜ್ಬುಲ್ಲಾ ಮೇಲೆ ವೈಮಾನಿಕ ದಾಳಿಗೆ ಆದೇಶಿಸಿದ್ದಾರೆ.

ಇಸ್ರೇಲ್ ಕನಿಷ್ಠ ನಾಲ್ಕು ಕಡೆಗಳಲ್ಲಿ ವೈಮಾನಿಕ ದಾಳಿ ನಡೆಸಿದೆ. ದಾಳಿಯಲ್ಲಿ ಆರು ಮಂದಿ ಹತ್ಯೆಗೀಡಾಗಿದ್ದಾರೆ ಎಂದು ಲೆಬನಾನ್ನ ಆರೋಗ್ಯ ಇಲಾಖೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-51-1465830805

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.