ಇಸ್ಲಾಮಾಬಾದ್: ಗುಪ್ತಚರ ವಿಭಾಗ ‘ಐಎಸ್ಐ’ನ ಮಹಾ ನಿರ್ದೇಶಕ ಲೆಫ್ಟಿನೆಂಟ್ ಜನರಲ್ ಮೊಹಮ್ಮದ್ ಅಸೀಂ ಮಲಿಕ್ ಅವರನ್ನು ರಾಷ್ಟ್ರೀಯ ಭದ್ರತೆ ಸಲಹೆಗಾರರನ್ನಾಗಿ ಪಾಕಿಸ್ತಾನ ನೇಮಕ ಮಾಡಿದೆ ಎಂದು ‘ಎಕ್ಸ್ಪ್ರೆಸ್ ಟ್ರಿಬ್ಯೂನ್’ ವರದಿ ಮಾಡಿದೆ.

ಭಾರತ ಹಾಗೂ ಪಾಕಿಸ್ತಾನ ನಡುವೆ ಉದ್ವಿಗ್ನ ಸ್ಥಿತಿ ಇರುವಾಗಲೇ ಅಸೀಂ ಅವರಿಗೆ ಹೆಚ್ಚುವರಿ ಹೊಣೆ ವಹಿಸಲಾಗಿದೆ.
.ಪಾಕಿಸ್ತಾನ: ಗಿಲ್ಗಿಟ್, ಸ್ಕರ್ದುಗೆ ವಿಮಾನ ಸಂಚಾರ ರದ್ದುಗೊಳಿಸಿದ ಪಿಎಐ.
ಅವರ ನೇಮಕದ ಬಗ್ಗೆ ಅಧೀಕೃತ ಘೋಷಣೆ ಮಾಡಲಾಗಿದೆ. 2024ರ ಸೆಪ್ಟೆಂಬರ್ನಲ್ಲಿ ಅವರನ್ನು ಐಎಸ್ಐನ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿತ್ತು.

ಐಎಸ್ಐ ಮುಖ್ಯಸ್ಥರಾಗುವುದಕ್ಕೂ ಮುನ್ನ ಜನರಲ್ ಮಲಿಕ್ ಅವರು ಪಾಕಿಸ್ತಾನ ಸೇನೆಯಲ್ಲಿ ಸಹಾಯಕ ಜನರಲ್ ಆಗಿ ಸೇವೆ ಸಲ್ಲಿಸಿದ್ದರು. ಸೇನಾ ಆಡಳಿತ ವ್ಯವಹಾರಗಳನ್ನು ಅವರು ನೋಡಿಕೊಳ್ಳುತ್ತಿದ್ದರು.

ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನ ಹಾಗೂ ಅದರ ಬಳಿಕ ದೇಶಾದ್ಯಂತ ಭುಗಿಲೆದ್ದ ಪ್ರತಿಭಟನೆ ನಿಗ್ರಹಿಸಲು ಅಸೀಮ್ ಪ್ರಮುಖ ಪಾತ್ರ ವಹಿಸಿದ್ದರು.
.ಭಾರತ vs ಪಾಕಿಸ್ತಾನ: ಉಭಯ ರಾಷ್ಟ್ರಗಳ ಸೇನಾ ಪಡೆ ಬಲಾಬಲ ಹೇಗಿದೆ?.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.