ಇಸ್ಲಾಮಾಬಾದ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾನುವಾರ ವಿಧಾನಸಭೆಗೆ ಚುನಾವಣೆ ನಡೆಯಿತು.

45 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಮತದಾರರು ಮತ ಚಲಾಯಿಸಿದರು. ಈ ಭಾಗದಲ್ಲಿ 32 ಲಕ್ಷಕ್ಕೂ ಹೆಚ್ಚಿನ ಮತದಾರರಿದ್ದಾರೆ.

ಚುನಾವಣೆಯಲ್ಲಿ ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ), ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಮತ್ತು ಪಾಕಿಸ್ತಾನ ಪೀಪಲ್ಸ್ ಪಾರ್ಟಿ (ಪಿಪಿಪಿ) ಒಳಗೊಂಡ ಕಠಿಣ ತ್ರಿಕೋನ ಸ್ಪರ್ಧೆಯನ್ನು ನಿರೀಕ್ಷಿಸಲಾಗಿದೆ.

ಕಳೆದ ವರ್ಷ ಗಿಲ್ಗಿಟ್– ಬಾಲಿಸ್ಟಾನದಲ್ಲಿಯೂ ಪಾಕಿಸ್ತಾನ ಚುನಾವಣೆ ನಡೆಸಿತ್ತು. ಇದಕ್ಕೆ ಭಾರತ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಮಿಲಿಟರಿ ಆಕ್ರಮಿತ ಪ್ರದೇಶದ ಸ್ಥಿತಿಯನ್ನು ಬದಲಾಯಿಸುವ ಯಾವುದೇ ಕ್ರಮಕ್ಕೆ ಕಾನೂನು ಮಾನ್ಯತೆ ಇರುವುದಿಲ್ಲ ಎಂದೂ ಭಾರತ ಎಚ್ಚರಿಕೆ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.