ಇಸ್ಲಾಮಾಬಾದ್: ಅಫ್ಗಾನಿಸ್ತಾನ ವಿರುದ್ಧ ನಡೆಯುತ್ತಿರುವ ಸೇನಾ ಕಾರ್ಯಾಚರಣೆಯಲ್ಲಿ ಅಫ್ಗನ್ ತಾಲಿಬಾನ್ ಅಧಿಕಾರಿಗಳು ಮತ್ತು ಅವರ ಬೆಂಬಲಿತ ಭಯೋತ್ಪಾದಕ ಸಂಘಟನೆಯ ಸದಸ್ಯರು ಸೇರಿ ಸುಮಾರು 331 ಮಂದಿಯನ್ನು ಹತ್ಯೆ ಮಾಡಲಾಗಿದೆ. 500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನದ ಮಾಹಿತಿ ಸಚಿವ ಅತ್ತಾವುಲ್ಲಾ ತರಾರ್ ಶನಿವಾರ ತಿಳಿಸಿದ್ದಾರೆ.

‘ಘಜಬ್ ಲಿಲ್ ಹಕ್’ ಹೆಸರಿನಡಿ ಕಾರ್ಯಾಚರಣೆ ನಡೆಸಿದ್ದ ಸೇನೆ, ಅಫ್ಗಾನಿಸ್ತಾನದ 37 ಸ್ಥಳಗಳ ಮೇಲೆ ವಾಯುದಾಳಿ ನಡೆಸಿದೆ. ಅಫ್ಗನ್ನ 104 ಸೇನಾ ಶಿಬಿರಗಳನ್ನು ನಾಶ ಪಡಿಸಿದ್ದು, 22 ಗಡಿ ಶಿಬಿರಗಳನ್ನು ವಶಕ್ಕೆ ಪಡೆಯಲಾಗಿದೆ. 163 ಕ್ಷಿಪಣಿ, ಶಸ್ತ್ರಸಜ್ಜಿತ ವಾಹನಗಳನ್ನು ನಾಶಪಡಿಸಲಾಗಿದೆ’ ಎಂದು ಅವರು ಹೇಳಿದ್ದಾರೆ.

ಪಾಕಿಸ್ತಾನ–ಅಫ್ಗಾನಿಸ್ತಾನದ 2,600 ಕಿಲೋ ಮೀಟರ್ ಉದ್ದದ ಗಡಿಗೆ ಹೊಂದಿಕೊಂಡ ಪಾಕ್ನ 53 ಸ್ಥಳಗಳನ್ನು ಗುರಿಯಾಗಿಸಿ ಅಫ್ಗಾನಿಸ್ತಾನ ದಾಳಿ ಮಾಡಿತ್ತು. ಇದಕ್ಕೆ ಪ್ರತ್ಯುತ್ತರವಾಗಿ ಶುಕ್ರವಾರ ಪಾಕಿಸ್ತಾನ ಸೇನೆ ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್ ಮತ್ತು ಕಂದಹಾರ್ಗಳ ಮೇಲೂ ಬಾಂಬ್ ದಾಳಿ ನಡೆಸಿತ್ತು.

ಪಾಕ್ಗೆ ಅಮೆರಿಕ ಬೆಂಬಲ: ಅಫ್ಗಾನಿಸ್ತಾನ ವಿರುದ್ಧ ಯುದ್ಧ ಘೋಷಿಸಿರುವ ಪಾಕಿಸ್ತಾನಕ್ಕೆ ಅಮೆರಿಕ ಬೆಂಬಲ ಸೂಚಿಸಿದೆ. ಅಫ್ಗಾನಿಸ್ತಾನ ಸರ್ಕಾರದ ಮೇಲೆ ಒತ್ತಡ ಹೇರಲು ಪಾಕಿಸ್ತಾನ ಆರಂಭಿಸಿರುವ ಸೇನಾ ಕಾರ್ಯಾಚರಣೆಯನ್ನು ನಾವು ನಿಲ್ಲಿಸುವುದಿಲ್ಲ ಎಂದು ಹೇಳಿದೆ.

ಮಾತುಕತೆಗೆ ಸಿದ್ಧ: ತಾಲಿಬಾನ್

ಪರಿಸ್ಥಿತಿ ವಿಷಮಗೊಳ್ಳುತ್ತಿದ್ದಂತೆಯೇ ಪಾಕಿಸ್ತಾನದ ಜೊತೆ ಮಾತುಕತೆಗೆ ಅಫ್ಗಾನಿಸ್ತಾನ ತಾಲಿಬಾನ್ ಉತ್ಸುಕತೆ ತೋರಿದೆ.

‘ಅಫ್ಗಾನಿಸ್ತಾನವು ಪರಸ್ಪರ ತಿಳಿವಳಿಕೆ ಮತ್ತು ಗೌರವದೊಂದಿಗೆ ವಿಚಾರಗಳನ್ನು ಇತ್ಯರ್ಥ ಮಾಡಿಕೊಳ್ಳಲು ಸದಾ ಬಯಸುತ್ತದೆ’ ಎಂದು ವಿದೇಶಾಂಗ ಸಚಿವ ಅಮಿರ್ ಖಾನ್ ಮುತ್ತಕಿ ಹೇಳಿದ್ದಾರೆ. ಸೌದಿ ಅರೇಬಿಯಾ ಮತ್ತು ಕತಾರ್ ದೇಶಗಳು ಶಾಂತಿ ಸ್ಥಾಪನೆಗೆ ಪ್ರಯತ್ನಿಸುತ್ತಿವೆ ಎಂದು ಮೂಲಗಳು ತಿಳಿಸಿವೆ.
.ಗಡಿ ಸಂಘರ್ಷ ತಾರಕಕ್ಕೆ: ಅಫ್ಗಾನಿಸ್ತಾನ ವಿರುದ್ಧ ಯುದ್ಧ ಘೋಷಿಸಿದ ಪಾಕಿಸ್ತಾನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.