ವಾಷಿಂಗ್ಟನ್: ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷ ನಿಲ್ಲಿಸುವ ನಿಟ್ಟಿನಲ್ಲಿ ನಡೆಯುತ್ತಿರುವ ರಾಜತಾಂತ್ರಿಕ ಪ್ರಯತ್ನಗಳಲ್ಲಿ ಪಾಕಿಸ್ತಾನ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ವರದಿಯಾಗಿದೆ.

ಆದರೆ ಇದಕ್ಕೆ ಪ್ರತಿಕ್ರಿಯೆ ನೀಡಿರುವ ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕ್ಯಾರೋಲಿನ್ ಲೆವಿಟ್, ಅಮೆರಿಕ ಅಧಿಕೃತವಾಗಿ ತಿಳಿಸುವವರೆಗೂ ಊಹಾಪೋಹಾದ ಸುದ್ದಿಗಳನ್ನು ಪರಿಗಣಿಸಬಾರದು ಎಂದು ಹೇಳಿದ್ದಾರೆ.

ಇರಾನ್ ಜೊತೆ ಎರಡು ದಿನಗಳಿಂದ ಉತ್ತಮ ಮಾತುಕತೆ ನಡೆದಿದ್ದು, ಇರಾನ್ನ ಇಂಧನ ಮೂಲಸೌಕರ್ಯದ ಮೇಲೆ ನಡೆಸಲು ಉದ್ದೇಶಿಸಿದ್ದ ದಾಳಿಗಳನ್ನು ಐದು ದಿನಗಳವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದರು. ಆ ಮಾತುಕತೆಯಲ್ಲಿ ಪಾಕಿಸ್ತಾನ ಪಾತ್ರದ ಬಗ್ಗೆ ವರದಿಗಳು ಬರುತ್ತಿವೆ.

ಎರಡೂ ದೇಶಗಳ ನಡುವೆ ಮಾತುಕತೆಗೆ ಪಾಕಿಸ್ತಾನ, ಟರ್ಕಿ ಮತ್ತು ಈಜಿಪ್ಟ್ ಪ್ರಯತ್ನ ಮಾಡುತ್ತಿವೆ ಎಂದು ರಾಯಿಟರ್ಸ್ ಮತ್ತು ಆಕ್ಸಿಯೋಸ್ ವರದಿಗಾರರು ಹೇಳಿದ್ದಾರೆ ಎಂದು ವರದಿಯಾಗಿದೆ. ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಅಮೆರಿಕ ಮತ್ತು ಇರಾನ್ನ ಉನ್ನತ ಮಟ್ಟದ ಪ್ರತಿನಿಧಿಗಳನ್ನು ಒಳಗೊಂಡ ಮಾತುಕತೆಯನ್ನು ಆಯೋಜಿಸಲು ಪ್ರಯತ್ನ ನಡೆಯುತ್ತಿವೆ ಎಂದು ಇಸ್ರೇಲ್ನ ಹಿರಿಯ ಅಧಿಕಾರಿಯೊಬ್ಬರು ರಾಯಿಟರ್ಸ್ಗೆ ತಿಳಿಸಿದ್ದಾರೆ.

ಇರಾನ್ನ ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಘರ್ ಘಾಲಿಬಾಫ್ ಅವರು ಇರಾನ್ ಅನ್ನು ಪ್ರತಿನಿಧಿಸುವ ಸಾಧ್ಯತೆ ಇದೆ. ಅಮೆರಿಕ ಪರವಾಗಿ ಶ್ವೇತಭವನದ ವಿಶೇಷ ರಾಯಭಾರಿಗಳಾದ ಸ್ಟೀವ್ ವಿಟ್ಕಾಫ್ ಮತ್ತು ಜೇರೆಡ್ ಕುಶ್ನರ್ ಜೊತೆಗೆ, ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಇರಾನಿನ ಅಧಿಕಾರಿಗಳೊಂದಿಗೆ ಪ್ರಸ್ತಾವಿತ ಶಾಂತಿ ಶೃಂಗಸಭೆಯಲ್ಲಿ ಭಾಗವಹಿಸಬಹುದು ಎಂದು ತಿಳಿದುಬಂದಿದೆ.

ಈ ನಡುವೆ ಭಾನುವಾರ ಅಮೆರಿಕ ಅಧ್ಯಕ್ಷರ ಜೊತೆ ಮಾತನಾಡಿದ್ದಾಗಿ ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಫ್ ಮುನೀರ್ ಹೇಳಿದ್ದು, ಪಾಕಿಸ್ತಾನವು ಮಧ್ಯಸ್ಥಿಕೆ ವಹಿಸುತ್ತದೆ ಎಂಬ ವರದಿಗಳಿಗೆ ಇಂಬು ನೀಡಿದೆ.

ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಸಹ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರೊಂದಿಗೆ ಚರ್ಚೆ ನಡೆಸಿ, ಈ ಪ್ರದೇಶದಲ್ಲಿ ಶಾಂತಿ ಮರುಸ್ಥಾಪಿಸಲು ಬೆಂಬಲ ವ್ಯಕ್ತಪಡಿಸಿದ್ದಾರೆ.

ಇರಾನ್ ಜೊತೆ ಮಾತುಕತೆಗಳು ಮುಂದುವರಿದಿದ್ದು, ಪ್ರಮುಖ ಒಪ್ಪಂದಗಳ ವಿಷಯ ಅಂತಿಮ ಹಂತದಲ್ಲಿದೆ ಎಂದು ಟ್ರಂಪ್ ಹೇಳಿದ್ದರು. ಆದರೆ, ಈ ಹೇಳಿಕೆಯನ್ನು ಇರಾನ್ ತಳ್ಳಿಹಾಕಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.