ಲಾಹೋರ್: ಪಾಕಿಸ್ತಾನದಲ್ಲಿ ನೆಲೆಸಿರುವ ಹಿಂದೂಗಳು ಶನಿವಾರ ವಿಜೃಂಭಣೆಯ ದೀಪಾವಳಿ ಆಚರಿಸಿಕೊಂಡಿದ್ದಾರೆ.

ದೀಪಾವಳಿ ಪ್ರಯುಕ್ತ ಲಾಹೋರ್, ಕರಾಚಿ ಸೇರಿದಂತೆ ಪಾಕಿಸ್ತಾನದ ಇತರ ಪ್ರಮುಖ ನಗರಗಳಲ್ಲಿ ನೆಲೆಸಿರುವ ಲಕ್ಷಾಂತರ ಹಿಂದೂಗಳು ದೇವಸ್ಥಾನಗಳಿಗೆ ಭೇಟಿ ನೀಡಿ ಪರಸ್ಪರ ಶುಭ ಹಾರೈಸಿಕೊಂಡಿದ್ದಾರೆ.

ಹಬ್ಬದ ಅಂಗವಾಗಿ ಕರಾಚಿಯ ಸ್ವಾಮಿ ನಾರಾಯಣ ದೇವಾಲಯ ಮತ್ತು ಲಾಹೋರ್‌ನ ಶ್ರೀ ಕೃಷ್ಣ ದೇವಾಲಯಗಳನ್ನು ದೀಪಗಳಿಂದ ಅಲಂಕರಿಸಲಾಗಿತ್ತು.

ಶುಭ ಕೋರಿದ ಪಾಕ್ ಪ್ರಧಾನಿ ಇಮ್ರಾನ್ ಖಾನ್

ಪಾಕಿಸ್ತಾನದ ಅಲ್ಪಸಂಖ್ಯಾತ ಹಿಂದೂ ಸಮುದಾಯಕ್ಕೆ ಪ್ರಧಾನಿ ಇಮ್ರಾನ್ ಖಾನ್ ಅವರು ಶನಿವಾರ ದೀಪಾವಳಿಯ ಶುಭಾಶಯ ಕೋರಿದ್ದಾರೆ.

'ದೇಶದ ಹಿಂದೂಗಳಿಗೆಲ್ಲ ದೀಪಾವಳಿಯ ಶುಭಾಶಯಗಳು' ಎಂದು ಅವರು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.