ಲಾಹೋರ್: ಭವಿಷ್ಯದಲ್ಲಿ ಭಾರತವು ಪಾಕಿಸ್ತಾನ ವಿರುದ್ಧ ದಾಳಿ ಮಾಡಲು ಮುಂದಾದರೆ, ಕೋಲ್ಕತ್ತದ ಮೇಲೆ ದಾಳಿ ಮಾಡುವ ಮೂಲಕ ತಕ್ಕ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಹೇಳಿದ್ದಾರೆ.

ಸಿಯಾಲ್ಕೋಟ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಭಾರತದ ವಶದಲ್ಲಿರುವ ಪಾಕಿಸ್ತಾನ ಪ್ರಜೆಗಳು ಅಥವಾ ಅವರದೇ ಜನರ ಮೃತದೇಹಗಳನ್ನು ಎಲ್ಲಾದರೂ ಎಸೆದು, ಅವರು ಭಯೋತ್ಪಾದಕರೆಂದು ಪ್ರಚಾರ ಮಾಡುವ ಮೂಲಕ ನಕಲಿ ಕಾರ್ಯಾಚರಣೆ (ಫೇಕ್ ಆಪರೇಷನ್) ನಡೆಸಲು ಭಾರತ ಯೋಜಿಸುತ್ತಿರುವ ಬಗ್ಗೆ ವರದಿಗಳು ಬಂದಿವೆ ಎಂದು ಅವರು ಆರೋಪಿಸಿದರು.

ಆದರೆ, ಈ ಆರೋಪವನ್ನು ಸಾಬೀತುಪಡಿಸುವ ಯಾವುದೇ ಪುರಾವೆಗಳನ್ನು ಅವರು ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಲಿಲ್ಲ.

ಭಾರತದ ಯಾವುದೇ ದಾಳಿಗೆ ಪಾಕಿಸ್ತಾನದ ಪ್ರತಿಕ್ರಿಯೆಯು ಅತ್ಯಂತ ವೇಗ ಮತ್ತು ನಿರ್ಣಾಯಕವಾಗಿರುತ್ತದೆ ಎಂದು ಖವಾಜಾ ಆಸಿಫ್ ಎಚ್ಚರಿಸಿದರು.

ನೆರೆಯ ದೇಶಗಳು ಯಾವುದೇ ತಪ್ಪು ಹೆಜ್ಜೆ ಇಟ್ಟರೂ ಪ್ರಸ್ತುತ ಪರಿಸ್ಥಿತಿಯಲ್ಲಿ ನಿರ್ಣಾಯಕ ಕ್ರಮ ಕೈಗೊಳ್ಳಲಾಗುವುದು ಎಂಬ ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಹೇಳಿಕೆಗೆ ಖವಾಜಾ ಆಸಿಫ್ ಈ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.