ಇಸ್ಲಾಮಾಬಾದ್: ದೇಶವು ಈಗಾಗಲೇ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದ್ದು, ಇದಕ್ಕೆ ಅಧಿಕಾರಿ ವರ್ಗ ಹಾಗೂ ರಾಜಕಾರಣಿಗಳನ್ನು ದೂಷಿಸಲಾಗುತ್ತಿದೆ ಎಂದು ರಕ್ಷಣಾ ಸಚಿವ ಖವಾಜಾ ಆಸಿಫ್ ತಿಳಿಸಿದ್ದಾರೆ.

ಸಿಯಾಲ್‌ಕೋಟ್‌ನಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿ ಮಾತನಾಡಿದ ಅವರು, ಪಾಕಿಸ್ತಾನ ತನ್ನ ಸ್ವಂತ ಕಾಲಿನ ಮೇಲೆ ನಿಲ್ಲಲು ಹಾಗೂ ಆರ್ಥಿಕ ಬಿಕ್ಕಟ್ಟನ್ನು ಸ್ಥಿರಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.

ದೇಶದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಂವಿಧಾನವನ್ನು ಅನುಸರಿಸದಿರುವುದರ ಜತೆಗೆ ಪ್ರಸ್ತುತ ಆರ್ಥಿಕ ಬಿಕ್ಕಟ್ಟಿಗೆ ಅಧಿಕಾರಶಾಹಿ ವರ್ಗ ಮತ್ತು ರಾಜಕಾರಣಿಗಳು ಸೇರಿದಂತೆ ಎಲ್ಲರೂ ಹೊಣೆಗಾರರು ಎಂದು ಅವರು ಹೇಳಿದ್ದಾರೆ.

‘ಪಾಕಿಸ್ತಾನ ದಿವಾಳಿಯಾಗುತ್ತಿದೆ ಎಂದು ನೀವು ಕೇಳಿರಬೇಕು. ಆದರೆ ನಾವು ದಿವಾಳಿಯಾದ ದೇಶದಲ್ಲಿ ವಾಸಿಸುತ್ತಿದ್ದೇವೆಯೇ’ ಎಂದರಲ್ಲದೆ, ನಮ್ಮ ಸಮಸ್ಯೆಗಳಿಗೆ ಪರಿಹಾರವು ದೇಶದೊಳಗೆ ಇದೆ. ಪಾಕಿಸ್ತಾನದ ಸಮಸ್ಯೆಗಳಿಗೆ ಐಎಂಎಫ್‌ನಿಂದ ಪರಿಹಾರ ತೆಗೆದುಕೊಂಡಿಲ್ಲ ಎಂದು ಆಸಿಫ್ ತಿಳಿಸಿದ್ದಾರೆ.

ಕಳೆದ 32 ವರ್ಷಗಳಿಂದ ವಿರೋಧ ಪಕ್ಷಗಳ ಪಾಳೆಯದಲ್ಲಿಯೇ ಕಳೆದಿದ್ದೇನೆ, ರಾಜಕೀಯ ವಿಡಂಭನೆಗಳನ್ನು ಕಣ್ಣಾರೆ ಕಂಡಿದ್ದೇನೆ ಎಂದಿದ್ದಾರೆ.

ಎರಡೂವರೆ ವರ್ಷಗಳ ಹಿಂದೆ ಪಾಕಿಸ್ತಾನಕ್ಕೆ ಭಯೋತ್ಪಾದಕರನ್ನು ಕರೆತರಲಾಯಿತು. ಇದು ಅಂತಿಮವಾಗಿ ಪ್ರಸ್ತುತ ಭಯೋತ್ಪಾದನೆಯ ಅಲೆಗೆ ಕಾರಣವಾಗಿದೆ ಎಂದು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಶುಕ್ರವಾರ ಕರಾಚಿಯ ಪೊಲೀಸ್ ಕಚೇರಿ ಮೇಲೆ ನಡೆದ ದಾಳಿ ಕುರಿತು ಮಾತನಾಡಿದ ಅವರು, ಭದ್ರತಾ ಸಂಸ್ಥೆಗಳು ದಾಳಿಕೋರರ ವಿರುದ್ಧ ಧೈರ್ಯದಿಂದ ಹೋರಾಡಿವೆ ಎಂದಿದ್ದಾರೆ.

ಇವನ್ನೂ ಓದಿ: ನ್ಯಾಷನಲ್ ಜಿಯಾಗ್ರಫಿಕ್ 'ವರ್ಷದ ಚಿತ್ರ' ಪ್ರಶಸ್ತಿ ಗೆದ್ದ ಭಾರತ ಮೂಲದ ಎಂಜಿನಿಯರ್

ಬೇಜವಾಬ್ದಾರಿ ಕೆಲಸ ಮುಂದುವರಿಸಬೇಡಿ: ಚೀನಾಕ್ಕೆ ಅಮೆರಿಕ ಎಚ್ಚರಿಸಿದ್ದೇಕೆ?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.