ಇಸ್ಲಾಮಾಬಾದ್: ಪಾಕಿಸ್ತಾನವು ಸ್ವದೇಶಿ ತಂತ್ರಜ್ಞಾನ ಬಳಸಿ ಅಭಿವೃದ್ಧಿಪಡಿಸಿರುವ, ತೈಮೂರ್ ಕ್ಷಿಪಣಿ ವ್ಯವಸ್ಥೆಯ ಪರೀಕ್ಷಾರ್ಥ ಪ್ರಯೋಗವನ್ನು ಯಶಸ್ವಿಯಾಗಿ ನಡೆಸಿದೆ ಎಂದು ಅಲ್ಲಿನ ಸೇನೆ ಶನಿವಾರ ತಿಳಿಸಿದೆ.

‘600 ಕಿ.ಮೀ ದೂರದವರೆಗಿನ ಗುರಿಗಳನ್ನು ಹೊಡೆದುರುಳಿಸಬಲ್ಲ ಈ ಕ್ಷಿಪಣಿಯ ಯಶಸ್ವಿ ಪರೀಕ್ಷೆಯು ರಾಷ್ಟ್ರೀಯ ಬಾಹ್ಯಾಕಾಶ ಮತ್ತು ರಕ್ಷಣಾ ಸಾಮರ್ಥ್ಯಗಳ ಪ್ರಗತಿಯ ಮತ್ತೊಂದು ಮೈಲಿಗಲ್ಲಾಗಿದೆ’ ಎಂದು ಸೇನೆಯು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

‘ಸಾಂಪ್ರದಾಯಿಕ ಸಿಡಿತಲೆಗಳನ್ನು ಹೊತ್ತೊಯ್ಯಬಲ್ಲ ಕ್ಷಿಪಣಿಯು ಸಮುದ್ರ ಮತ್ತು ಭೂಮಿ ಮೇಲಿನ ಗುರಿಗಳನ್ನು ನಿಖರವಾಗಿ ನಾಶಪಡಿಸುವ ಸಾಮರ್ಥ್ಯವನ್ನು ಹೊಂದಿದೆ’ ಎಂದಿದೆ.

ಶತ್ರುಗಳ ವಾಯು ಮತ್ತು ಕ್ಷಿಪಣಿ ರಕ್ಷಣಾ ವ್ಯವಸ್ಥೆಗಳನ್ನು ಪರಿಣಾಮಕಾರಿಯಾಗಿ ತಪ್ಪಿಸಲು ತೈಮೂರ್ ಕ್ಷಿಪಣಿಯನ್ನು ಅತ್ಯಂತ ಕಡಿಮೆ ಎತ್ತರದಲ್ಲಿ ಹಾರುವಂತೆ ವಿನ್ಯಾಸಗೊಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.