ಭ್ರಷ್ಟಾಚಾರ ವಿರೋಧಿ ಕಾನೂನುಗಳ ತಿದ್ದುಪಡಿಗಳನ್ನು ಮಾಜಿ ಪ್ರಧಾನಿ ಖಾನ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ತಿದ್ದುಪಡಿಗಳನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿತ್ತು. ಇದನ್ನು ಪ್ರಶ್ನಿಸಿ, ಸರ್ಕಾರ ಮತ್ತು ಇತರ ಪಕ್ಷಗಳು ಸಲ್ಲಿಸಿದ್ದ ಮೇಲ್ಮನವಿಗಳನ್ನು ಆಲಿಸಿದ ಐವರು ನ್ಯಾಯಮೂರ್ತಿಗಳಿದ್ದ ಪೀಠವು ಜೂನ್ 6ರಂದು ತೀರ್ಪನ್ನು ಕಾಯ್ದಿರಿಸಿತ್ತು. ಈ ತೀರ್ಪನ್ನು ಮುಖ್ಯ ನ್ಯಾಯಮೂರ್ತಿ (ಸಿಜೆಪಿ) ಖಾಜಿ ಫಯೇಜ್ ಇಸಾ ಅವರು ಶುಕ್ರವಾರ ಪ್ರಕಟಿಸಿದರು.