ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಾಧುನಿಕ ತಂತ್ರಜ್ಞಾನ 5ಜಿ ಆರಂಭಿಸಲು ಪಾಕ್‌ ಸಿದ್ಧತೆ

Last Updated 24 ಜನವರಿ 2021, 10:27 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ಪಾಕಿಸ್ತಾನವು 2022–23ರಲ್ಲಿ ಅತ್ಯಾಧುನಿಕವಾದ 5ಜಿ ಇಂಟರ್‌ನೆಟ್‌ ನೆಟ್‌ವರ್ಕ್‌ ಅನ್ನು ಪರಿಚಯಿಸಲು ಯೋಜನೆ ರೂಪಿಸಿದೆ. ಇದು ಡೌನ್‌ಲೋಡ್‌ ವೇಗವನ್ನು 10 ಪಟ್ಟು ಹೆಚ್ಚಿಸಲಿದೆ. ಅಲ್ಲದೆ ದೇಶದ ಆರ್ಥಿಕ ಚಟುವಟಿಕೆಯನ್ನು ಇನ್ನಷ್ಟು ವಿಸ್ತರಿಸಲು ನೆರವಾಗಲಿದೆ ಎಂದು ಮಾಧ್ಯಮ ವರದಿಯೊಂದು ತಿಳಿಸಿದೆ.

‘5ಜಿ ತಂತ್ರಜ್ಞಾನ ಪರಿಚಯಿಸಲು ಪಾಕಿಸ್ತಾನ ಸಮಗ್ರ ಯೋಜನೆ ಅಭಿವೃದ್ಧಿಪಡಿಸುತ್ತಿದೆ’ ಎಂದು ಪಾಕಿಸ್ತಾನ ದೂರಸಂಪರ್ಕ ಪ್ರಾಧಿಕಾರವು ತನ್ನ ವಾರ್ಷಿಕ ವರದಿಯಲ್ಲಿ ಪ್ರಸ್ತಾಪಿಸಿದೆ.

‘ಪಾಕಿಸ್ತಾನದಲ್ಲಿ ಕೋವಿಡ್‌ ಬಿಕ್ಕಟ್ಟಿನ ವೇಳೆಯಲ್ಲಿ ಡಿಜಿಟಲ್‌ ಆರ್ಥಿಕತೆ ವಿಸ್ತರಿಸಿದೆ. ಹಾಗಾಗಿ ಡಿಜಿಟಲ್‌ ಆರ್ಥಿಕತೆಯನ್ನು ಇನ್ನಷ್ಟು ಹೆಚ್ಚಿಸಲು ಬೇಕಾದ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ನಿಯಂತ್ರಕರು ಮತ್ತು ಭಾಗೀದಾರರು ನಿರ್ಧರಿಸಿದ್ದಾರೆ’ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT