ಇಸ್ಲಾಮಾಬಾದ್ : ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಮಾತುಕತೆಗಾಗಿ ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಆಯೋಜಿಸಿದ್ದ ಸಭೆಗೆ ಸಂಬಂಧಿಸಿ ಸೇನೆಯ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸೀಮ್ ಮುನೀರ್ ಅವರ ಪಾತ್ರವೇ ಮುಖ್ಯವಾಗಿತ್ತು.

ಇಲ್ಲಿನ ವಿಮಾನನಿಲ್ದಾಣದಲ್ಲಿ ಶನಿವಾರ ಬಂದಿಳಿದ ಅಮೆರಿಕ ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್ ಅವರನ್ನು ಅಸೀಮ್ ಮುನೀರ್ ಅವರೇ ಸ್ವಾಗತಿಸಿದರು. ಈ ವೇಳೆ ಅವರು ಸಾಮಾನ್ಯ ನಾಗರಿಕನಂತೆ ಬಟ್ಟೆ ಧರಿಸಿ ಗಮನ ಸೆಳೆದಿದ್ದರು.

ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪಿಸುವುದಕ್ಕಾಗಿ ಅಮೆರಿಕ ಹಾಗೂ ಇರಾನ್ ಅನ್ನು ಮುಖಾಮುಖಿಯಾಗಿಸಿ, ನೇರ ಮಾತುಕತೆಗೆ ವೇದಿಕೆ ಕಲ್ಪಿಸುವುದಕ್ಕೆ ಸಂಬಂಧಿಸಿ ಅಸೀಮ್ ಮುನೀರ್ ಅವರ ಶ್ರಮಕ್ಕೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಶಂಸೆ ವ್ಯಕ್ತವಾಗುತ್ತಿದೆ.

ಮುನೀರ್ ಅವರ ವರ್ಚಸ್ಸು ಹೆಚ್ಚುತ್ತಿದ್ದು, ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳಿಗೆ ಸಂಬಂಧಿಸಿದಂತೆ ಅವರು ಪ್ರಮುಖ ಪಾತ್ರ ವಹಿಸು ತ್ತಿರುವುದನ್ನು ಈ ಬೆಳವಣಿಗೆ ತೋರಿಸುತ್ತದೆ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ.

‘ಮುನೀರ್ ಅವರು ಯೋಧ ಮಾತ್ರವಲ್ಲ ರಾಜನೀತಿಜ್ಞ ಹಾಗೂ ರಾಜತಾಂತ್ರಿಕ’ ಎಂದು ಇಸ್ಲಾಮಾಬಾದ್ ಮೂಲದ ರಾಜಕೀಯ ವಿಶ್ಲೇಷಕ ಕಮರ್ ಚೀಮಾ ಹೇಳುತ್ತಾರೆ.

‘ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನ ಕುರಿತ ಗ್ರಹಿಕೆಯನ್ನು ಅವರು ಬದ ಲಾಯಿಸಿದ್ದಾರೆ. ಅಂತರರಾಷ್ಟ್ರೀಯ ಸಂಬಂಧಗಳಲ್ಲಿ ಪಾಕಿಸ್ತಾನ ವಹಿಸುವ ಪಾತ್ರಕ್ಕೆ ಅವರು ಬಲ ತುಂಬಿದ್ದಾರೆ’ ಎಂದು ಚೀಮಾ ಹೇಳುತ್ತಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-51-2085397141

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.