ಇಸ್ಲಾಮಾಬಾದ್: ಕಾಶ್ಮೀರ ಸೇರಿದಂತೆ ಭಾರತದೊಂದಿಗಿನ ಎಲ್ಲ ಸಮಸ್ಯೆಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಸಿದ್ಧವಾಗಿದ್ದೇವೆ ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಇಂದು (ಬುಧವಾರ) ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಕಾಶ್ಮೀರದ ಜನತೆಗೆ ಪಾಕಿಸ್ತಾನದ ಅಚಲ ಬೆಂಬಲವನ್ನು ಪುನರುಚ್ಚರಿಸಿದ್ದಾರೆ.

'ಕಾಶ್ಮೀರ ಐಕ್ಯತಾ ದಿನ' ಅಂಗವಾಗಿ ಮುಜಫರಾಬಾದ್ನಲ್ಲಿ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಶಾಸಕಾಂಗ ಸಭೆಯ ವಿಶೇಷ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಷರೀಫ್, ಭಾರತದೊಂದಿಗಿನ ವಿವಾದಗಳನ್ನು ಇತ್ಯರ್ಥಗೊಳಿಸಲು ಇಂಗಿತ ವ್ಯಕ್ತಪಡಿಸಿದ್ದಾರೆ.

'ಭಾರತದೊಂದಿಗೆ ಕಾಶ್ಮೀರ ಸೇರಿದಂತೆ ಎಲ್ಲ ವಿದಾದಗಳನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಲು ಬಯಸುತ್ತೇವೆ. ಈ ನಿಟ್ಟಿನಲ್ಲಿ ಮಾತುಕತೆಗಾಗಿ ಭಾರತ ಮುಂದೆ ಬರಬೇಕು' ಎಂದು ಅವರು ಆಗ್ರಹಿಸಿದ್ದಾರೆ.

ಆದರೆ ಭಯೋತ್ಪಾದನೆ ಮತ್ತು ಮಾತುಕತೆಗಳು ಒಟ್ಟಿಗೆ ಹೋಗಲು ಸಾಧ್ಯವಿಲ್ಲ. ಭಯೋತ್ಪಾದನೆ, ಹಿಂಸಾಚಾರ ಮುಕ್ತ ವಾತಾವರಣದಲ್ಲಿ ಮಾತ್ರ ಮಾತುಕತೆ ಸಾಧ್ಯ ಎಂದು ಭಾರತ ತನ್ನ ನಿಲುವನ್ನು ಹಲವು ಸಲ ಸ್ಪಷ್ಟಪಡಿಸಿತ್ತು.
.ವಿಶ್ವಸಂಸ್ಥೆಯ ನಿರ್ಣಯದಂತೆ ಕಾಶ್ಮೀರ ವಿವಾದ ಬಗೆಹರಿಸಬೇಕು: ಚೀನಾ .ಕಾಶ್ಮೀರ ವಿವಾದ ಇತ್ಯರ್ಥಕ್ಕೆ ಭಾರತ ಸಿದ್ಧವೆಂದು ನೆಹ್ರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.