ಭಾನುವಾರ, 3 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್‌ ಸೇನೆಯಿಂದ ಏಳು ಉಗ್ರರ ಹತ್ಯೆ

Published 22 ಜನವರಿ 2024, 14:25 IST
Last Updated 22 ಜನವರಿ 2024, 14:25 IST
ಅಕ್ಷರ ಗಾತ್ರ

ಕ್ವೆಟ್ಟಾ: ಪಾಕಿಸ್ತಾನದ ಭದ್ರತಾ ಪಡೆಗಳು ಅಫ್ಗಾನಿಸ್ತಾನದ ಗಡಿ ಸಮೀಪ ಏಳು ಉಗ್ರರನ್ನು ಹತ್ಯೆ ಮಾಡಿದೆ ಎಂದು ಸೇನೆ ಸೋಮವಾರ ತಿಳಿಸಿದೆ.

ಗುಪ್ತಚರ ಮಾಹಿತಿ ಆಧರಿಸಿ ನೈರುತ್ಯ ಬಲೂಚಿಸ್ತಾನ ಪ್ರಾಂತ್ಯದ ಝೋಬ್‌ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದವು. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಏಳು ಉಗ್ರರು ಹತರಾದರು. ಅವರ ಬಳಿಯಿದ್ದ ಯುದ್ಧ ಸಾಮಗ್ರಿಗಳನ್ನು ವಶಕ್ಕೆ ಪಡೆದಿರುವುದಾಗಿ ಅದು ಹೇಳಿದೆ.

ಈ ಭಾಗದಲ್ಲಿ ಬಲೂಚ್‌ ರಾಷ್ಟ್ರೀಯವಾದಿಗಳು, ಇಸ್ಲಾಮಿಕ್‌ ಉಗ್ರರ ಗುಂಪುಗಳು ಮತ್ತು ಐಎಸ್‌ ಗುಂಪುಗಳು ಇತ್ತೀಚೆಗೆ ಭದ್ರತಾ ಪಡೆಗಳ ಮೇಲೆ ದಾಳಿಗಳನ್ನು ನಡೆಸಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT