ಭಾನುವಾರ, 10 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನದ ಮಾಜಿ ಪ್ರಧಾನಿಗಳ ಭ್ರಷ್ಟಾಚಾರ ಪ್ರಕರಣ ಮರು ತನಿಖೆ

Published 21 ಸೆಪ್ಟೆಂಬರ್ 2023, 14:27 IST
Last Updated 21 ಸೆಪ್ಟೆಂಬರ್ 2023, 14:27 IST
ಅಕ್ಷರ ಗಾತ್ರ

ಇಸ್ಲಾಮಾಬಾದ್: ಮಾಜಿ ಪ್ರಧಾನಿ ನವಾಜ್ ಷರೀಫ್ ಮತ್ತು ಮಾಜಿ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಸೇರಿದಂತೆ ಪಾಕಿಸ್ತಾನದ ಇನ್ನಿತರ ಪ್ರಮುಖ ರಾಜಕೀಯ ನಾಯಕರ ವಿರುದ್ಧ ಭ್ರಷ್ಟಾಚಾರದ ಪ್ರಕರಣಗಳನ್ನು ಪುನಃ ತನಿಖೆಗೊಳಪಡಿಸಲು  ಭ್ರಷ್ಟಾಚಾರ ನಿಗ್ರಹ ದಳ ನಿರ್ಧರಿಸಿದೆ.

ಭ್ರಷ್ಟಾಚಾರ ನಿಗ್ರಹ ಕಾನೂನುಗಳಿಗೆ ತಂದಿದ್ದ ತಿದ್ದುಪಡಿಗಳನ್ನು ಸುಪ್ರೀಂ ಕೋರ್ಟ್ ಇತ್ತೀಚೆಗೆ ರದ್ದುಗೊಳಿಸಿದ ಬೆನ್ನಲ್ಲೇ, ಪಾಕಿಸ್ತಾನದ ಭ್ರಷ್ಟಾಚಾರ ನಿಗ್ರಹ ದಳ ಈ ನಿರ್ಧಾರಕ್ಕೆ ಮುಂದಾಗಿದೆ.  

₹50 ಕೋಟಿಗಿಂತ ಕಡಿಮೆ ಭ್ರಷ್ಟಾಚಾರದ ಪ್ರಕರಣಗಳನ್ನು ಮರು ತನಿಖೆ ಮಾಡಬೇಕು ಎಂದು ಭ್ರಷ್ಟಾಚಾರ ನಿಗ್ರಹ ದಳ(ಎನ್ಎಬಿ) ತಿಳಿಸಿದೆ ಎಂದು ಡಾನ್ ಪತ್ರಿಕೆ ವರದಿ ಮಾಡಿತ್ತು. 

ಕಳೆದ ವಾರವಷ್ಟೇ ಭ್ರಷ್ಟಾಚಾರ ನಿಗ್ರಹದ ಕಾನೂನುಗಳಿಗೆ ಪಾಕಿಸ್ತಾನದ ಸುಪ್ರೀಂ ಕೋರ್ಟ್ ತಿದ್ದುಪಡಿ ತಂದಿತ್ತು. ಈ ಮೂಲಕ ಮಾಜಿ ಪ್ರಧಾನಿ ಆಸಿಫ್ ಅಲಿ ಜರ್ದಾರಿ, ಮಾಜಿ ಪ್ರಧಾನಿಗಳಾದ ನವಾಜ್ ಷರೀಫ್, ಶೆಹಬಾಜ್ ಷರೀಫ್, ಯುಸೂಫ್ ರಜಾ ಗಿಲಾನಿ, ರಾಜಾ ಪರ್ವೆಜ್ ಅಶ್ರಫ್ ಮತ್ತು ಶಾಹೀದ್ ಖಾಕನ್ ಅಬ್ಬಾಸಿ ವಿರುದ್ಧದ ಭ್ರಷ್ಟಾಚಾರದ ಪ್ರಕರಣಗಳನ್ನು ಮರುಸ್ಥಾಪಿಸಿತ್ತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT