ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನ: ಇಮ್ರಾನ್‌ ಖಾನ್‌ ಆಪ್ತ ಕುರೇಶಿ ಬಂಧನ

Published 20 ಆಗಸ್ಟ್ 2023, 16:07 IST
Last Updated 20 ಆಗಸ್ಟ್ 2023, 16:07 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ರಾಜತಾಂತ್ರಿಕ ಗೋಪ್ಯ ಮಾಹಿತಿ ಸೋರಿಕೆ ಪ್ರಕರಣದಲ್ಲಿ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರ ಆಪ್ತ, ಮಾಜಿ ವಿದೇಶಾಂಗ ಸಚಿವ ಶಾ ಮಹಮ್ಮದ್‌ ಕುರೇಶಿ ಅವರನ್ನು ಬಂಧಿಸಲಾಗಿದೆ.

ಕುರೇಶಿ (67) ಅವರನ್ನು ಶನಿವಾರ ರಾತ್ರಿ ಬಂಧಿಸಿ ಫೆಡರಲ್ ತನಿಖಾ ಸಂಸ್ಥೆಯ (ಎಫ್‌ಐಎ)  ಮುಖ್ಯ ಕಚೇರಿಗೆ ಕರೆದೊಯ್ಯಲಾಗಿತ್ತು. ಭಾನುವಾರ ಅವರನ್ನು ಇಲ್ಲಿನ ಸೆಷನ್ಸ್‌ ಕೋರ್ಟ್‌ ಎದುರು ಹಾಜರುಪಡಿಸಲಾಗಿದ್ದು, ಕೋರ್ಟ್‌ ಅವರನ್ನು ಒಂದು ದಿನದ ಮಟ್ಟಿಗೆ ಎಫ್‌ಐಎ ವಶಕ್ಕೆ ನೀಡಿದೆ.

ಕುರೇಶಿ ಅವರು ವಿದೇಶಾಂಗ ಸಚಿವರಾಗಿದ್ದ ಅವಧಿಯಲ್ಲಿ ಅಮೆರಿಕದಲ್ಲಿರುವ ಪಾಕಿಸ್ತಾನ ರಾಯಭಾರ ಕಚೇರಿಯು ವಿದೇಶಾಂಗ ಇಲಾಖೆಗೆ ಕಳುಹಿಸಿದ್ದ ಸಂದೇಶವನ್ನು ಬಹಿರಂಗಪಡಿಸಿದ ಆರೋಪದ ಮೇಲೆ ಅವರನ್ನು ಅಧಿಕೃತ ಗೋಪ್ಯ ಕಾಯ್ದೆ ಅಡಿಯಲ್ಲಿ ಬಂಧಿಸಲಾಗಿದೆ.

ಎಫ್‌ಐಎ ವಶಕ್ಕೆ ನೀಡುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಕುರೇಶಿ, ‘ಸಂಬಂಧಿಸದ ಯಾವುದೇ ವ್ಯಕ್ತಿಗಳೊಂದಿಗೂ ನಾನು ಗೋಪ್ಯ ಮಾಹಿತಿ ಹಂಚಿಕೊಂಡಿಲ್ಲ. ಇದು ರಾಜಕೀಯ ಪ್ರೇರಿತ ಪ್ರಕರಣ’ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT