ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಧ್ವಂಸ ಪ್ರಕರಣ: ಇಮ್ರಾನ್ ಖಾನ್ ಖುಲಾಸೆ

Published 20 ಮೇ 2024, 13:40 IST
Last Updated 20 ಮೇ 2024, 13:40 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ಎರಡು ಧ್ವಂಸ ಪ್ರಕರಣಗಳಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿದ್ದ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಮತ್ತು ಪಾಕಿಸ್ತಾನ್‌ ತೆಹ್ರೀಕ್‌–ಎ–ಇನ್ಸಾಫ್‌ ಪಕ್ಷದ (ಪಿಟಿಐ) ಇತರ ನಾಯಕರನ್ನು ಇಲ್ಲಿನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯವು ಸೋಮವಾರ ಖುಲಾಸೆಗೊಳಿಸಿದೆ.

2022ರ ಮಾರ್ಚ್‌ನಲ್ಲಿ ನಡೆದ ರ‍್ಯಾಲಿ ಸಂದರ್ಭದಲ್ಲಿ ನಡೆದ ಎರಡು ಧ್ವಂಸ ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಾಲಯವು ಈ ಆದೇಶ ಪ್ರಕಟಿಸಿತು.

ಭ್ರಷ್ಟಾಚಾರ ಪ್ರಕರಣದಲ್ಲಿ ಇಮ್ರಾನ್‌ ಖಾನ್‌ ಅವರ ಬಂಧನವಾದ ನಂತರ ಸೆಕ್ಷನ್‌ 144 ಅಡಿ ವಿಧಿಸಿದ್ದ ನಿಷೇಧಾಜ್ಞೆ ಉಲ್ಲಂಘಿಸಿದ ಆರೋಪದಡಿ ಖಾನ್‌ ಮತ್ತು ಇತರರ ಮೇಲೆ ಕೋಹಸಾರ್‌ ಮತ್ತು ಕರಾಚಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT