ಇಸ್ಲಾಮಾಬಾದ್: ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್ಗೆ ತೆರಳುವ ಎಲ್ಲ ವಿಮಾನಗಳ ಸಂಚಾರವನ್ನು ಪಾಕಿಸ್ತಾನ ರದ್ದುಗೊಳಿಸಿದೆ.
‘ಅನಿಶ್ಚಿತತೆಯ ಭದ್ರತಾ ಪರಿಸ್ಥಿತಿ’ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪಾಕಿಸ್ತಾನ ಇಂಟರ್ನ್ಯಾಷನಲ್ ಏರ್ಲೈನ್ಸ್ನ ವಕ್ತಾರ ಅಬ್ದುಲ್ಲಾ ಹಫೀಜ್ ಸೋಮವಾರ ತಿಳಿಸಿದ್ದಾರೆ.
ಪ್ರಯಾಣಿಕರು ಮತ್ತು ಸಿಬ್ಬಂದಿ ರಕ್ಷಣೆ ದೃಷ್ಟಿಯಿಂದ ಅಫ್ಗಾನಿಸ್ತಾನ ವಿಮಾನಯಾನ ಪ್ರಾಧಿಕಾರದ ಜತೆ ಸಮಾಲೋಚನೆ ನಡೆಸಿ ವಿಮಾನ ಸಂಚಾರ ರದ್ದುಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಾಬೂಲ್ ವಿಮಾನ ನಿಲ್ದಾಣದಲ್ಲಿ ಸಾವಿರಾರು ಮಂದಿ ಸೇರಿದ್ದು, ದಟ್ಟಣೆ ಉಂಟಾಗಿದೆ. ವಿವಿಧ ದೇಶಗಳ ರಾಯಭಾರಿ ಕಚೇರಿಗಳು ತಮ್ಮ ಸಿಬ್ಬಂದಿಯನ್ನು ಸ್ವದೇಶಕ್ಕೆ ವಾಪಸ್ ಕಳುಹಿಸಲು ಪರದಾಡುತ್ತಿದ್ದಾರೆ.